Featured

ಮಂಗಳೂರು : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ತುಂಬಲು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : ಡಾ. ಎಂ.ಎನ್. ರಾಜೇಂದ್ರ ಕುಮಾರ್ – vishwanews24

ಮಂಗಳೂರು : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ತುಂಬಲು  ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : ಡಾ. ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ವತಿಯಿಂದ 2023-24ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ಸಂಜೆ ಬ್ಯಾಂಕ್ ನಲ್ಲಿರುವ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ಜರುಗಿತು. ಪ್ರಾರಂಭದಲ್ಲಿ ಯೋಗ ಸಾಧಕಿ ತನುಶ್ರೀ ಪಿತ್ರೋಡಿ ಅವರಿಂದ ಯೋಗ ಪ್ರದರ್ಶನ ನಡೆಯಿತು.

ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, “ನಾವು ಶೈಕ್ಷಣಿಕ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕಾರ್ಯಕ್ರಮವನ್ನು ಕಳೆದ 16 ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದೇವೆ. ಇನ್ನುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ತುಂಬುವ ನಿಟ್ಟಿನಲ್ಲಿ ಇದೊಂದು ಮಾದರಿ ಕಾರ್ಯವಾಗಿದೆ. ಎಲ್ಲ ವಿದ್ಯಾರ್ಥಿಗಳಿಗೂ ಹೆಚ್ಚು ಅಂಕ ಗಳಿಸುವ ಮನಸ್ಸು ಇರುತ್ತದೆ ಆದರೆ ಕೆಲವರಿಗೆ ಕಷ್ಟವಾಗುತ್ತದೆ. ಇಂದು ಹಿಂದೆ ಉಳಿದಿರುವ ಮಕ್ಕಳು ಮುಂದಿನ ದಿನಗಳಲ್ಲಿ ಸಾಧನೆ ಮಾಡಲು ಮನಸು ಮಾಡಬೇಕು“ ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಉದ್ಯಮಿ ಯುಕೆ ಮೋನು ಮಾತನಾಡಿ, “ಇದೊಂದು ಸುಂದರ ಸಮಾರಂಭ. ಸಾಧಕ ಮಕ್ಕಳನ್ನು ಪುರಸ್ಕರಿಸುವ ಮೂಲಕ ಮುಂದಿನ ಪೀಳಿಗೆಯ ಮಕ್ಕಳನ್ನು ಬೆನ್ನುತಟ್ಟುವ ಕೆಲಸವನ್ನು ಎಸ್ ಸಿಡಿಸಿಸಿ ಬ್ಯಾಂಕ್ ಮಾಡುತ್ತ ಬಂದಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ರಾಜೇಂದ್ರ ಕುಮಾರ್ ಅವರ ಸಹಕಾರ ಶ್ಲಾಘನೀಯ. ಈ ವಯಸ್ಸಿನಲ್ಲಿ ಅವರು ಮಾಡುತ್ತಿರುವ ಕಾರ್ಯ ಇಂದಿನ ಯುವಕರಿಗೆ ಮಾದರಿ. ವಿದ್ಯಾರ್ಥಿಗಳಿಗೆ ಈ ರೀತಿಯ ಪ್ರೋತ್ಸಾಹ ದೊರೆತಲ್ಲಿ ಆವರ ಬಾಳು ಹಸನಾಗುತ್ತದೆ“ ಎಂದರು.

ವೇದಿಕೆಯಲ್ಲಿ ಉದ್ಯಮಿ ಯುಕೆ ಮೋನು, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ವಿನಯ್ ಕುಮಾರ್ ಸೂರಿಂಜೆ, ರವೀಂದ್ರ ಕಂಬಳಿ ಮತ್ತಿತರರು ಉಪಸ್ಥಿತರಿದ್ದರು. ಸಿಇಓ ಗೋಪಿನಾಥ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

21 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

21 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

22 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

22 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

22 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

22 hours ago