ಮಂಗಳೂರು: ವಿದ್ಯಾರ್ಥಿಗಳ ಶಿಕ್ಷಣ ಶುಲ್ಕ ಪಾವತಿಗೆ ಒತ್ತಡ ಹೇರದಂತೆ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗೆ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸ್ಪಷ್ಟ ಸೂಚನೆ ನೀಡಿದ್ದಾರೆ.
ಕೆಲವು ಶಾಲಾ, ಕಾಲೇಜಿನ ಮುಖ್ಯ ಶಿಕ್ಷಕರು, ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳ ಹೆತ್ತವರ ಬಳಿ ಕಳೆದ ಶೈಕ್ಷಣಿಕ ವರ್ಷದ ಬಾಕಿ ಶುಲ್ಕವನ್ನು ಒಂದೇ ಕಂತಿನಲ್ಲಿ ಪಾವತಿಸಬೇಕು ಎಂದು ದೂರವಾಣಿ ಕರೆ ಮಾಡಿ ಒತ್ತಾಯಿಸುವುದು, ಪಾವತಿಸದಿದ್ದರೆ ಆನ್‌ಲೈನ್ ಪಾಠ ತಡೆ ಹಿಡಿಯಲಾಗುವುದು ಎಂದು ಎಚ್ಚರಿಸುವುದು, ವರ್ಗಾವಣೆ ಪತ್ರ ಕೊಡುವುದಿಲ್ಲ ಎನ್ನುವುದು, ಲೇಖನ ಸಾಮಗ್ರಿಗಳನ್ನು ನಿರ್ದಿಷ್ಟ ಅಂಗಡಿಗಳಲ್ಲಿ ಮಾತ್ರ ಪಡೆಯಬೇಕು ಎಂದು ಒತ್ತಡ ಹಾಕುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ.
ಆ ಹಿನ್ನಲೆಯಲ್ಲಿ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ, ಯಾವ ಕಾರಣಕ್ಕೂ ವಿದ್ಯಾರ್ಥಿಗಳ ಹೆತ್ತವರು, ಪೋಷಕರಲ್ಲಿ ಶುಲ್ಕ ಪಾವತಿಗಾಗಿ ಒತ್ತಡ ಹಾಕಬಾರದು. ಒಂದು ವೇಳೆ ಒತ್ತಡ ಹಾಕಿದ ಬಗ್ಗೆ ದೂರುಗಳು ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…