ಮಂಗಳೂರು: ನಗರದ ಕಾನೂನು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದ ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಮಂಗಳೂರಿನ ಜೆಎಂಎಫ್‌ಸಿ 3ನೇ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ.
2021ರ ಸೆ.25ರಂದು ಮಧ್ಯಾಹ್ನ ರಾಜೇಶ್ ತನ್ನ ಮಂಗಳೂರಿನ ಕರಂಗಲ್ಪಾಡಿಯ ಕಚೇರಿಯಲ್ಲಿ ಇಂಟರ್ನ್‌ಶಿಪ್‌ಗೆಂದು ಬಂದಿದ್ದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅತ್ಯಾಚಾರಕ್ಕೆ ಯತ್ನಿಸಿದಾಗ ಆಕೆ ತಪ್ಪಿಸಿಕೊಂಡು ಹೋಗಿದ್ದಳು. ಈ ಸಂದರ್ಭ ರಾಜೇಶ್ ಭಟ್ ಆಕೆಗೆ ಜೀವ ಬೆದರಿಕೆ ಹಾಕಿದ್ದ. ಅಲ್ಲದೆ ಕೃತ್ಯದ ಬಗ್ಗೆ ದೂರಿನ ವಿಚಾರವನ್ನು ಮುಕ್ತಾಯಗೊಳಿಸುವಂತೆ ಮಂಗಳೂರಿನ ವಕೀಲರ ಬಾರ್ ಅಸೋಸಿಯೇಶನ್‌ನ ಅಧ್ಯಕ್ಷರಿಗೆ ಒತ್ತಾಯದಲ್ಲಿ ಪತ್ರವನ್ನು ಬರೆಯಿಸಿಕೊಂಡು ಸಹಿ ಪಡೆದುಕೊಂಡಿದ್ದ. ಬಳಿಕ ಕೃತ್ಯವನ್ನು ಮರೆ ಮಾಚುವ ಉದ್ದೇಶದಿಂದ ವಿದ್ಯಾರ್ಥಿನಿಯ ಗೆಳತಿಯಿಂದ ಒತ್ತಾಯದಲ್ಲಿ ಸಹಿ ಪಡೆದುಕೊಂಡಿದ್ದ. ಕೃತ್ಯದ ಕುರಿತು ಆಡಿಯೋ ಪ್ರಸಾರ ಮಾಡಿರುವ ಬಗ್ಗೆಯೂ ಕೃತ್ಯವನ್ನು ಮರೆಮಾಚುವ ಉದ್ದೇಶದಿಂದ ಒತ್ತಾಯದಿಂದ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದ ಎಂಬುದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಉಡುಪಿ ರಜತ ಮಹೋತ್ಸವ ಕಾರ್ಯಕ್ರಮ ಹಬ್ಬದಂತೆ ಆಚರಣೆಗೆ ಶಾಸಕ ರಘುಪತಿ ಭಟ್ ಕರೆ – Vishwanews24
ಆರೋಪಿ ರಾಜೇಶ್ ತನ್ನ ಕಚೇರಿಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾವನ್ನು ಮೊಬೈಲ್‌ಗೆ ಸಂಪರ್ಕಿಸಿಕೊಂಡಿದ್ದ. ಅದರ ಮೂಲಕ ವಿದ್ಯಾರ್ಥಿನಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದುದನ್ನು ಕೂಡ ಲೈಂಗಿಕ ಉದ್ದೇಶದಿಂದ ನೋಡುತ್ತಿದ್ದ. ಅಲ್ಲದೆ ಆತ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ. ಆತನಿಗೆ ಅನಂತ ಭಟ್ ಮತ್ತು ಅಚ್ಚುತ್ತ ಭಟ್ ನೆರವು, ಆಶ್ರಯ ಒದಗಿಸಿದ್ದರು ಎಂದು ದೋಷಾರೋಪಣಾ ಪತ್ರದಲ್ಲಿ ತಿಳಿಸಲಾಗಿದೆ. ಒಟ್ಟು 110 ಮಂದಿ ಸಾಕ್ಷಿದಾರರನ್ನಾಗಿ ತೋರಿಸಲಾಗಿದೆ.
ಎಸಿಪಿಯಿಂದ ಚಾರ್ಜ್‌ಶೀಟ್ ಸಲ್ಲಿಕೆ : ಪ್ರಕರಣದ ಗಂಭೀರತೆ ಪರಿಗಣಿಸಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತನಿಖೆಯನ್ನು ಅಂದಿನ ಎಸಿಪಿ ರಂಜಿತ್ ಬಂಡಾರು ಅವರಿಗೆ ವಹಿಸಿದ್ದರು. ಅನಂತರ ಎಸಿಪಿ ದಿನಕರ ಶೆಟ್ಟಿ ತನಿಖೆ ಮುಂದುವರಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…