ಮಂಗಳೂರು:ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗಾಗಿ ಡಿಸೆಂಬರ್ 15 ರವರೆಗೆ ಲೈನ್ ಬ್ಲಾಕ್ ವಿಧಿಸುವ ನೈರುತ್ಯ ರೈಲ್ವೆಯ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯ ಅನುಮೋದಿಸಿದೆ. ಪರಿಣಾಮವಾಗಿ, ಹಲವಾರು ಹಗಲಿನ ರೈಲುಗಳ ರದ್ದತಿಯನ್ನು ವಿಸ್ತರಿಸಲಾಗಿದೆ.
ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲು ಡಿಸೆಂಬರ್ 13 ರವರೆಗೆ ರದ್ದಾಗಿದ್ದು, ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ರೈಲು ಡಿಸೆಂಬರ್ 14 ರವರೆಗೆ ರದ್ದಾಗಿದೆ. ರೈಲು ಸಂಖ್ಯೆ 16575 ರ ವಾರದಲ್ಲಿ ಮೂರು ದಿನ ಇರುವ ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಎಕ್ಸ್‌ಪ್ರೆಸ್ ಡಿಸೆಂಬರ್ 14 ರವರೆಗೆ ರದ್ದಾಗಿದ್ದು, ರೈಲು ಸಂಖ್ಯೆ 16576ರ ವಾರದಲ್ಲಿ ಮೂರು ದಿನ ಇರುವ ಮಂಗಳೂರು ಜಂಕ್ಷನ್-ಯಶವಂತಪುರದ ಗೋಮಟೇಶ್ವರ ಎಕ್ಸ್‌ಪ್ರೆಸ್ ಡಿಸೆಂಬರ್ 15 ರವರೆಗೆ ರದ್ದಾಗಿದೆ.
ಅದೇ ರೀತಿ, ರೈಲು ಸಂಖ್ಯೆ 16515ರ ವಾರದಲ್ಲಿ ಮೂರು ದಿನ ಇರುವ ಯಶವಂತಪುರ – ಕಾರವಾರ ರೈಲು ಡಿಸೆಂಬರ್ 15 ರವರೆಗೆ ರದ್ದಾಗಲಿದ್ದು, ರೈಲು ಸಂಖ್ಯೆ 16516ರ ವಾರದಲ್ಲಿ ಮೂರು ದಿನ ಇರುವ ಕಾರವಾರ – ಯಶವಂತಪುರ ರೈಲು ಡಿಸೆಂಬರ್ 16 ರವರೆಗೆ ರದ್ದಾಗಲಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…