ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ಬುಧವಾರ ರಾತ್ರಿ 9 ಗಂಟೆ ವೇಳೆಗೆ ನಡೆದಿದ್ದು ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.
ಮೃತರಿಬ್ಬರು ಆಟೋ ಚಾಲಕರಾಗಿದ್ದು, ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ(46) ಹಾಗೂ ಸಕಲೇಶಪುರದ ಪಾಲ್ಯ ನಿವಾಸಿ ರಾಜು(50) ಎಂದು ಗುರುತಿಸಲಾಗಿದೆ. ರೋಸಾರಿಯೋ ಶಾಲೆಯ ಹಿಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಿಕ್ಷಾ ಚಾಲಕರೊಬ್ಬರು ಆಟೋ ತೊಳಿಯುತ್ತಿರುವ ಸಮಯದಲ್ಲಿ ವಿದ್ಯುತ್ ತಂತಿಯೊಂದು ಅವರ ಮೇಲೆ ಕಡಿದು ಬಿದ್ದಿದೆ ಎನ್ನಲಾಗಿದೆ. ತಕ್ಷಣ ಅವರಿಗೆ ಓರ್ವರಿಗೆ ವಿದ್ಯುತ್ ಶಾಕ್ ತಗುಲಿದ್ದು ಅದನ್ನು ಕಂಡು ಮತ್ತೊಬ್ಬ ರಿಕ್ಷಾ ಚಾಲಕರು ಪ್ರಾಣ ಉಳಿಸಲು ಹೋಗಿ ತಮ್ಮ ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮೆಸ್ಕಾಂ ಹಾಗೂ ಪಾಲಿಕೆ ಅಧಿಕಾರಿಗಳು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.
ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…