ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರ ಸ್ಥಾನದ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ದ.ಕ., ಉಡುಪಿ ದ್ವಿಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಬಿಜೆಪಿ, ಕಾಂಗ್ರೆಸ್ ಜತೆ ಎಸ್ಡಿಪಿಐ ಅಭ್ಯರ್ಥಿಗಳು ಕಣದಲ್ಲಿದ್ದು, ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನ ಮಂಜುನಾಥ ಭಂಡಾರಿ ಹಾಗೂ ಎಸ್ ಡಿಪಿಐ ನ ಶಾಫಿ ಕೆ. ಅಭ್ಯರ್ಥಿಗಳಾಗಿದ್ದಾರೆ.
ದ.ಕ.- ಉಡುಪಿ ಜಿಲ್ಲೆಯಲ್ಲಿ ಒಟ್ಟು 6,040 ಮತದಾರರಿದ್ದು, ಒಟ್ಟು 389 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ ಚಲಾವಣೆ ಮಾಡಿದ್ರು. ಮಂಗಳೂರು ಮಹಾನಗರಪಾಲಿಕೆ ಮತ ಕೇಂದ್ರದಲ್ಲಿ ಮತ ಚಲಾವಣೆ ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ವಿಧಾನ ಪರಿಷತ್ ನ 25 ಸ್ಥಾನಗಳ ಪೈಕಿ 20 ರಲ್ಲಿ ಬಿಜೆಪಿ ಸ್ಪರ್ಧಿಸಿದೆ. 15 ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸಲಿದೆ. ದಕ್ಷಿಣ ಕನ್ನಡ-ಉಡುಪಿ ದ್ವಿಸದಸ್ಯ ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಜಯಗಳಿಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿದರು.
ಪ್ರಥಮ ಪ್ರಾಶಸ್ತ್ಯದ ಮತಗಳ ಮೂಲಕ ಕೋಟ ಶ್ರೀನಿವಾಸ್ ಪೂಜಾರಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು. ಮಂಗಳೂರು ಮಹಾನಗರಪಾಲಿಕೆ ಮತಕೇಂದ್ರದಲ್ಲಿ ಶಾಸಕ ವೇದವ್ಯಾಸ ಕಾಮತ್ ಮತ ಚಲಾವಣೆ ಮಾಡಿದ್ರು, ಇಂದು ಬೆಳಗ್ಗೆ ಮಾಜಿ ಸಚಿವ, ಉಳ್ಳಾಲ ಹಾಲಿ ಶಾಸಕ ಯು.ಟಿ.ಖಾದರ್ ಅವರು ಉಳ್ಳಾಲ ನಗರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಸದ್ಯ ರಾಜ್ಯದ ವಿಧಾನಪರಿಷತ್ ಪೈಕಿ 20 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಕೆಲವೆಡೆ ನೇರಾನೇರಾ ಫೈಟ್ ಇದೆ. ಡಿಸೆಂಬರ್ 14ರಂದು ಚುನಾವಣೆಯ ಫಲಿತಾಂಸ ಹೊರಬೀಳಲಿದೆ.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…