Featured

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ನಾಮಕರಣದ ಬೋರ್ಡ್ ಹಾಕಿಸಿದ ಮಿಥುನ್‌ ರೈ -Vishwanews24

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ನಾಮಕರಣದ ಬೋರ್ಡ್ ಹಾಕಿಸಿದ ಮಿಥುನ್‌ ರೈ -Vishwanews24

ಮಂಗಳೂರು : ಮಿಥುನ್‌ ರೈ ಅವರು ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ನಾಮಕರಣದ ಬೋರ್ಡ್ ಹಾಕಿಸಿದ್ದಾರೆ. ಹಾಗೆಯೇ, ”ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ಮುಂದೆ ಕೋಟಿ ಚೆನ್ನಯ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್ ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ.

ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 50 ವರ್ಷಗಳ ಕಾಲ ಅದಾನಿ ಕಂಪನಿಗೆ ಹಸ್ತಾಂತರಗೊಳಿಸಿದ ಬಳಿಕ ವಿಮಾನ ನಿಲ್ದಾಣದ ನಾಮಫಲಕದಲ್ಲಿ ಅದಾನಿ ಏರ್‌‌ಪೋರ್ಟ್ ಎಂದು ಸೇರಿಸಲಾಗಿದೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಮಿಥುನ್‌ ರೈ ಅವರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಹೆಸರು ಇಡಲು ಒತ್ತಾಯ ಮಾಡುತ್ತಲ್ಲೇ ಇದ್ದಾರೆ.

 

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ನೀವು ನಮ್ಮ ಮಾತನ್ನು ಕೇಳುವುದಿಲ್ಲವೇ? ತುಳುವರ ಭಾವನೆಗಳಿಗೆ ನೀವು ಗಮನ ನೀಡುವುದಿಲ್ಲವೇ? ನಮ್ಮ ನಗರದಲ್ಲಿ ಅದಾನಿ ಏರ್‌ಪೋರ್ಟ್ಸ್ ಬೋರ್ಡ್‌ಗಳನ್ನು ಹಾಕಲು ನಾವು ಒಪ್ಪುವುದಿಲ್ಲ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ಮುಂದೆ ಕೋಟಿ ಚೆನ್ನಯ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್ ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರು ಇಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ರೂಪದಲ್ಲಿ ಈ ಬೋರ್ಡ್ ಹಾಕಲಾಗಿದೆ. ವಿಮಾನ ನಿಲ್ದಾಣಕ್ಕೆ ತೆರಳುವ ಕೆಂಜಾರು ಸಮೀಪದಲ್ಲಿ ಸುಸ್ವಾಗತ ಕೋಟಿ-ಚೆನ್ನಯ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಎಂದು ಹಾಕಲಾಗಿದ್ದು ಕೆಳ ಭಾಗದಲ್ಲಿ ಮಿಥುನ್‌ ರೈ ಅವರ ಭಾವಚಿತ್ರವೂ ಇದೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

2 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

3 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

3 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

3 hours ago