ಮಂಗಳೂರು : ಮಿಥುನ್ ರೈ ಅವರು ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ನಾಮಕರಣದ ಬೋರ್ಡ್ ಹಾಕಿಸಿದ್ದಾರೆ. ಹಾಗೆಯೇ, ”ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ಮುಂದೆ ಕೋಟಿ ಚೆನ್ನಯ ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ.
ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 50 ವರ್ಷಗಳ ಕಾಲ ಅದಾನಿ ಕಂಪನಿಗೆ ಹಸ್ತಾಂತರಗೊಳಿಸಿದ ಬಳಿಕ ವಿಮಾನ ನಿಲ್ದಾಣದ ನಾಮಫಲಕದಲ್ಲಿ ಅದಾನಿ ಏರ್‌ಪೋರ್ಟ್ ಎಂದು ಸೇರಿಸಲಾಗಿದೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಮಿಥುನ್ ರೈ ಅವರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಹೆಸರು ಇಡಲು ಒತ್ತಾಯ ಮಾಡುತ್ತಲ್ಲೇ ಇದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ನೀವು ನಮ್ಮ ಮಾತನ್ನು ಕೇಳುವುದಿಲ್ಲವೇ? ತುಳುವರ ಭಾವನೆಗಳಿಗೆ ನೀವು ಗಮನ ನೀಡುವುದಿಲ್ಲವೇ? ನಮ್ಮ ನಗರದಲ್ಲಿ ಅದಾನಿ ಏರ್‌ಪೋರ್ಟ್ಸ್ ಬೋರ್ಡ್‌ಗಳನ್ನು ಹಾಕಲು ನಾವು ಒಪ್ಪುವುದಿಲ್ಲ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ಮುಂದೆ ಕೋಟಿ ಚೆನ್ನಯ ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರು ಇಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ರೂಪದಲ್ಲಿ ಈ ಬೋರ್ಡ್ ಹಾಕಲಾಗಿದೆ. ವಿಮಾನ ನಿಲ್ದಾಣಕ್ಕೆ ತೆರಳುವ ಕೆಂಜಾರು ಸಮೀಪದಲ್ಲಿ ಸುಸ್ವಾಗತ ಕೋಟಿ-ಚೆನ್ನಯ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಎಂದು ಹಾಕಲಾಗಿದ್ದು ಕೆಳ ಭಾಗದಲ್ಲಿ ಮಿಥುನ್ ರೈ ಅವರ ಭಾವಚಿತ್ರವೂ ಇದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…