ಉಡುಪಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀಮಧ್ವ ಶಂಕರ ಹೆಸರಿಡುವಂತೆ ಉಡುಪಿ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಒತ್ತಾಯಿಸಿದ್ದಾರೆ.
ಭಾರತ ವಿಶ್ವ ಗುರುವಾಗಬೇಕೆಂದು ಎಲ್ಲರೂ ಬಯಸುತ್ತಿರುವಾಗ ಭಾರತೀಯ ಮೇರು ದಾರ್ಶನಿಕ, ಜಗದ್ಗುರುಗಳಾದ ಶ್ರೀಮಧ್ವಾಚಾರ್ಯರು ಮತ್ತು ಶ್ರೀಶಂಕರಾಚಾರ್ಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡುವುದು ಅರ್ಥಪೂರ್ಣ, ಅಪೂರ್ವ ಮತ್ತು ಮೌಲಿಕ ಎಂದು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮನ ಹೆಸರಿನಲ್ಲಿ ವಿಮಾನ ನಿಲ್ದಾಣ ರೂಪುಗೊಂಡಂತೆ ದಾರ್ಶನಿಕ ಆಚಾರ್ಯರ ನೆಲೆವೀಡಾದ ದಕ್ಷಿಣ ಭಾರತದ ವಿಮಾನ ನಿಲ್ದಾಣಕ್ಕೆ ಶ್ರೀಮಧ್ವ ಶಂಕರ ನಾಮಕರಣ ಭಾರತೀಯ ದಾರ್ಶನಿಕ ಪರಂಪರೆಗೆ ಗೌರವ ಸಲ್ಲಿಸಿದಂತೆ. ಜಗತ್ತಿನಲ್ಲಿಧರ್ಮ ಪ್ರಚಾರಕ್ಕೆ ಪೂರಕ, ಭಾವೈಕ್ಯತೆಗೂ ಇಂಬು ನೀಡಲಿದೆ.
ಆಧ್ಯಾತ್ಮಿಕತೆಯೇ ಭಾರತದ ಮೂಲ ಮತ್ತು ಅಪೂರ್ವ ಸಂಪತ್ತಾಗಿದ್ದು, ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರದಲ್ಲಷ್ಟೇ ಭಾರತ ಭವಿಷ್ಯದಲ್ಲಿ ಜಗತ್ತಿನ ನೇತೃತ್ವ ಪಡೆಯಲು ಉಜ್ವಲ ಮತ್ತು ವಿಪುಲ ಅವಕಾಶವಿದೆ. ಶ್ರೀರಾಮಾನುಜಾಚಾರ್ಯ, ಬಸವಣ್ಣ ಮೊದಲಾದ ಮಹಾ ಧಾರ್ಮಿಕ ನೇತಾರರ ಮೂಲ ಸ್ಥಳಗಳ ಸಮೀಪದಲ್ಲಿರುವ ಹಾಗೂ ದೇಶದ ಉಳಿದ ವಿಮಾನ ನಿಲ್ದಾಣಗಳಿಗೆ ಧಾರ್ಮಿಕ ನೇತಾರರ ನಾಮಕರಣವೇ ಹೆಚ್ಚು ಪ್ರಶಸ್ತ.
ಕೊರೊನಾ ಹಿನ್ನೆಲೆಯಲ್ಲಿ ಜಗತ್ತಿಗೆ ಆಧ್ಯಾತ್ಮಿಕ ಆಂದೋಲನದ ಅಗತ್ಯ ಬಹಳಷ್ಟಿದ್ದು ಈ ಹಿನ್ನೆಲೆಯಲ್ಲಿ ಧಾರ್ಮಿಕ, ಆಧ್ಯಾತ್ಮಿಕ ಚಿಂತನೆ, ಕೆಲಸ ಕಾರ್ಯಗಳಿಗೆ ಸರಕಾರ ಹೆಚ್ಚಿನ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀಮಧ್ವ ಶಂಕರರ ಹೆಸರಿಡಲು ಸಂಬಂಧಿತರು ಗಮನಹರಿಸುವಂತೆ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…