Featured

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು: ಶಾಸಕರಿಂದ ಸಿ.ಎಂ. ಗೆ ಮನವಿ -Vishwanews24

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು: ಶಾಸಕರಿಂದ ಸಿ.ಎಂ. ಗೆ ಮನವಿ -Vishwanews24

ಕೇಂದ್ರ ಸರ್ಕಾರ‌ಕ್ಕೆ ಶಿಫಾರಸ್ಸು ಸಲ್ಲಿಸುವ ಭರವಸೆ : ಜೆ. ಸಿ. ಮಾಧುಸ್ವಾಮಿ

ಬೆಂಗಳೂರು: ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಸೂಚಿಸಿ ಕೇಂದ್ರ ಸರ್ಕಾರ‌ಕ್ಕೆ ಶಿಫಾರಸ್ಸು ಸಲ್ಲಿಸುವ ಭರವಸೆಯನ್ನು ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ನೀಡಿದ್ದಾರೆ.

ಈ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಕಾರಣಿಕ ವೀರರಾದ ಕೋಟಿ ಚೆನ್ನಯರು ಹೆಸರನ್ನು ಇರಿಸುವ ಬೇಡಿಕೆ ಕರಾವಳಿ ಭಾಗದಲ್ಲಿ ಬಹು ಹಿಂದಿನಿಂದ‌ಲೇ ಕೇಳಿ ಬರುತ್ತಿತ್ತು. ಈ ವಿಮಾನ ನಿಲ್ದಾಣ ಅಧಾನಿ ಸಂಸ್ಥೆಯ ವ್ಯಾಪ್ತಿಗೆ ಸೇರಿದ ಬಳಿಕ ಈ ನಿಲ್ದಾಣ‌ದ ಹೆಸರು ಬದಲಾವಣೆಯ ಕೂಗು ಹೆಚ್ಚಾಗಿದೆ. ಹಾಗೆಯೇ ಕೋಟಿ ಚೆನ್ನಯರ ಹೆಸರು ಸೇರಿದಂತೆ ಇನ್ನೂ ಅನೇಕ ಹೆಸರುಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಗಮನವನ್ನು ಸೆಳೆದಿರುವ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಅವರು, ಈ ವಿಮಾನ ನಿಲ್ದಾಣ‌ಕ್ಕೆ ಕೋಟಿ ಚೆನ್ನಯ ವಿಮಾನ ನಿಲ್ದಾಣ ಎಂದು ಹೆಸರನ್ನಿಡುವಂತೆ ಪ್ರಸ್ತಾಪ ಸಲ್ಲಿಸಿದ್ದಾರೆ. ಅಧಿವೇಶನ‌ದ ಶೂನ್ಯ ವೇಳೆಯಲ್ಲಿ ಅವರು ಈ ವಿಚಾರ‌ವನ್ನು ಪ್ರಸ್ತಾಪ ಮಾಡಿದ್ದಾರೆ. ಕೋಟಿ ಚೆನ್ನಯರ ಹೆಸರನ್ನಿಡುವಂತೆ ಆಗ್ರಹಿಸಿ ಕರಾವಳಿ‌ಯ ಕೆಲವೆಡೆ ಸಮಾವೇಶ‌ಗಳು ನಡೆಯುತ್ತಿರುವುದನ್ನು ಸರ್ಕಾರ‌ದ ಗಮನಕ್ಕೆ ತಂದಿದ್ದಾರೆ.

ಉಮಾನಾಥ ಕೋಟ್ಯಾನ್ ಅವರ ಪ್ರಸ್ತಾಪ‌ಕ್ಕೆ ಶಾಸಟ ಹರೀಶ್ ಪೂಂಜ, ವೇದವ್ಯಾಸ ಕಾಮತ್ ಮೊದಲಾದವರು ಸಹಮತ ಸೂಚಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago