ಬೆಂಗಳೂರು: ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಸೂಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಸಲ್ಲಿಸುವ ಭರವಸೆಯನ್ನು ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ನೀಡಿದ್ದಾರೆ.
ಈ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಕಾರಣಿಕ ವೀರರಾದ ಕೋಟಿ ಚೆನ್ನಯರು ಹೆಸರನ್ನು ಇರಿಸುವ ಬೇಡಿಕೆ ಕರಾವಳಿ ಭಾಗದಲ್ಲಿ ಬಹು ಹಿಂದಿನಿಂದಲೇ ಕೇಳಿ ಬರುತ್ತಿತ್ತು. ಈ ವಿಮಾನ ನಿಲ್ದಾಣ ಅಧಾನಿ ಸಂಸ್ಥೆಯ ವ್ಯಾಪ್ತಿಗೆ ಸೇರಿದ ಬಳಿಕ ಈ ನಿಲ್ದಾಣದ ಹೆಸರು ಬದಲಾವಣೆಯ ಕೂಗು ಹೆಚ್ಚಾಗಿದೆ. ಹಾಗೆಯೇ ಕೋಟಿ ಚೆನ್ನಯರ ಹೆಸರು ಸೇರಿದಂತೆ ಇನ್ನೂ ಅನೇಕ ಹೆಸರುಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಗಮನವನ್ನು ಸೆಳೆದಿರುವ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಅವರು, ಈ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ವಿಮಾನ ನಿಲ್ದಾಣ ಎಂದು ಹೆಸರನ್ನಿಡುವಂತೆ ಪ್ರಸ್ತಾಪ ಸಲ್ಲಿಸಿದ್ದಾರೆ. ಅಧಿವೇಶನದ ಶೂನ್ಯ ವೇಳೆಯಲ್ಲಿ ಅವರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಕೋಟಿ ಚೆನ್ನಯರ ಹೆಸರನ್ನಿಡುವಂತೆ ಆಗ್ರಹಿಸಿ ಕರಾವಳಿಯ ಕೆಲವೆಡೆ ಸಮಾವೇಶಗಳು ನಡೆಯುತ್ತಿರುವುದನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ.
ಉಮಾನಾಥ ಕೋಟ್ಯಾನ್ ಅವರ ಪ್ರಸ್ತಾಪಕ್ಕೆ ಶಾಸಟ ಹರೀಶ್ ಪೂಂಜ, ವೇದವ್ಯಾಸ ಕಾಮತ್ ಮೊದಲಾದವರು ಸಹಮತ ಸೂಚಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…