Featured

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್.ಟಿ. -ಪಿ.ಸಿ.ಆರ್. ಪರೀಕ್ಷೆ ಕಡ್ಡಾಯ -Vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್.ಟಿ. -ಪಿ.ಸಿ.ಆರ್. ಪರೀಕ್ಷೆ ಕಡ್ಡಾಯ -Vishwanews24

ಮಂಗಳೂರು, : ಇಂಗ್ಲೆಂಡ್ ರಾಷ್ಟ್ರದಲ್ಲಿ ಕೋವಿಡ್-19 ರೋಗದ ಹೊಸ ತಳಿಯ ವೈರಸ್ ಪತ್ತೆಯಾಗಿದ್ದು, ಇದರ ಹರಡುವಿಕೆಯನ್ನು ತಡೆಯಲು ಇಂಗ್ಲೆಂಡ್‍ನಿಂದ ಭಾರತಕ್ಕೆ ಬರುವ ಎಲ್ಲಾ ಅಂತಾರಾಷ್ಟ್ರೀಯ ವಿಮಾನವನ್ನು ಈಗಾಗಲೇ ರದ್ದುಪಡಿಸಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಂಗಳೂರು, ಮಹಾರಾಷ್ಟ್ರ, ಹೈದರಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ ಜಿಲ್ಲೆಗೆ ಡಿಸೆಂಬರ್ 7 ರಿಂದ ಆಗಮಿಸಿರುವ ಎಲ್ಲಾ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಾಗುವುದು.

ಜಿಲ್ಲೆಗೆ ಆಗಮಿಸಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ ಸ್ವಯಂ ಪ್ರೇರಿತವಾಗಿ ಬಂದು, ಕಡ್ಡಾಯವಾಗಿ ಆರ್.ಟಿ.-ಪಿ.ಸಿ.ಆರ್. ಪರೀಕ್ಷೆಗೆ ಒಳಪಡಿಸಬೇಕು.

ಸಾರ್ವಜನಿಕರು ತಮ್ಮ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿದೇಶದಿಂದ ಆಗಮಿಸಿರುವ ವ್ಯಕ್ತಿಗಳು ಇದ್ದಲ್ಲಿ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (9449843050), ನೋಡಲ್ ಅಧಿಕಾರಿ ಕೋವಿಡ್-19(9972343984), ಜಿಲ್ಲಾ ಸರ್ವೇಕ್ಷಣಾಧಿಕಾರಿ (9448887706), ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಾದ ಮಂಗಳೂರು (9448151928), ಬಂಟ್ವಾಳ (9845838677), ಬೆಳ್ತಂಗಡಿ (9845967576), ಪುತ್ತೂರು (9448445853), ಸುಳ್ಯ(9449662224) ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

7 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

7 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

8 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

9 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

9 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

9 hours ago