ಮಂಗಳೂರು: ಇಲ್ಲಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2020 ಜನವರಿ ತಿಂಗಳಿನಲ್ಲಿ ಬಾಂಬ್ ಇರಿಸಿದ್ದ ಆದಿತ್ಯ ರಾವ್ ದೋಷಿ ಎಂದಿರುವ ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ಬುಧವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.
ತೀರ್ಪಿನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ 1967 ರ ಸೆಕ್ಷನ್ 16 ಅಡಿಯಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10000 ದಂಡ ವಿಫಲವಾದರೆ 6 ತಿಂಗಳ ಸರಳ ಜೈಲು ಶಿಕ್ಷೆಯನ್ನು ವಿಧಿಸಿದ್ದು, ಸ್ಫೋಟಕ ವಸ್ತುಗಳ ಕಾಯ್ದೆ 1908ರ ಸೆಕ್ಷನ್ 4 ರ ಪ್ರಕಾರ 5 ವರ್ಷಗಳ ಕಠಿಣ ಸೆರೆವಾಸ ಮತ್ತು 10000 ರೂ. ದಂಡ, ವಿಫಲವಾದರೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಅನುಭವಿಸಬೇಕು ಎಂದು ಕೋರ್ಟ್ ಆದೇಶ ನೀಡಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೋಟಕವನ್ನಿರಿಸಿ ಆರೋಪಿ ಆದಿತ್ಯ ರಾವ್ ನಾಪತ್ತೆಯಾಗಿ ಬಳಿಕ ಬೆಂಗಳೂರಿನಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ನಂತರ ಹೆಚ್ಚಿನ ವಿಚಾರಣೆಗೆ ಆತನನ್ನು ಮಂಗಳೂರು ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು.
ಆದಿತ್ಯ ರಾವ್ ಈ ಹಿಂದೆ ಕೆಲಸ ಕೇಳಿಕೊಂಡು ಹೋದಾಗ, ತನಗೆ ಕೆಲಸ ನೀಡಿರಲಿಲ್ಲ ಎಂಬ ಸಿಟ್ಟಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎರಡು ಬಾರಿ ಹುಸಿ ಬಾಂಬ್ ಕರೆ ಮಾಡಿ ಜೈಲು ಸೇರಿದ್ದ.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…