ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ್ದ ಯುವಕ ಮತ್ತು ಯುವತಿಯ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರಿಬ್ಬರಿಗೆ ವಿಮಾನಯಾನಕ್ಕೆ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂಡಿಗೋ ವಿಮಾನಯಾನ ಸಂಸ್ಥೆಯ ಮ್ಯಾನೇಜರ್ ನೀಡಿರುವ ದೂರಿನಂತೆ ದಿಪಯಾನ್ ಮಾಜಿ (23) ಮತ್ತು ಸಿಮ್ರಾನ್ ಟಾಮ್ (23) ವಿರುದ್ಧ ಭಾರತೀಯ ದಂಡ ಸಂಹಿತೆ 505 (1)(ಬಿ) ಮತ್ತು (ಸಿ)ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯುವತಿವಿಮಾನದೊಳಗಿದ್ದ ತನ್ನ ಗೆಳೆಯ ದಿಪಯಾನ್ ಮಾಜಿ ಎನ್ನುವಾತನಿಗೆ ಕಳುಹಿಸಿದ್ದ ವಾಟ್ಸ್ ಆಯಪ್ ಸಂದೇಶದಲ್ಲಿ ‘ಬಾಂಬರ್’ ಎನ್ನುವ ಶಬ್ದವನ್ನು ಉಲ್ಲೇಖೀಸಿದ್ದು, ನಿರ್ದಿಷ್ಟ ಸಮುದಾಯದ ಬಗ್ಗೆಯೂ ಚಾಟ್ ಮಾಡಿದ್ದರು ಎಂದು ಮ್ಯಾನೇಜರ್ ದೂರಿನಲ್ಲಿ ತಿಳಿಸಿದ್ದಾರೆ.
ಇನ್ನು ಆತಂಕ ಮತ್ತು ಗೊಂದಲ ಸೃಷ್ಟಿಸಿ ವಿಮಾನ ಪ್ರಯಾಣ ಮತ್ತು ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಿದ ಹಿನ್ನೆಲೆಯಲ್ಲಿ ಯುವತಿ ಮತ್ತು ಯುವಕನಿಗೆ ವಿಮಾನಯಾನಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ನಿಷೇಧ ಹೇರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…