ಮಂಗಳೂರು: ಸೋಮವಾರ, ಅ.13 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದೆ.
ಮೂಲಗಳ ಪ್ರಕಾರ, ಅಕ್ಟೋಬರ್ 13 ರಂದು ಸಂಜೆ 6.10 ಕ್ಕೆ ಮುಂಬೈನಿಂದ ಇಂಡಿಗೋ ವಿಮಾನದಲ್ಲಿ ಬಂದ ಶಂಕರ್ ನಾರಾಯಣ್ ಪೊದ್ದಾರ್ ಎಂಬ ಪ್ರಯಾಣಿಕನ ಬಳಿ ಮಾದಕ ವಸ್ತುಗಳು ಇರಬಹುದು ಎಂಬ ಮಾಹಿತಿ ಬಂದಿತ್ತು. ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಸಿಐಎಸ್‌ಎಫ್‌ನ ಸಿಐಡಬ್ಲ್ಯೂ ತಂಡ, ಪ್ರಯಾಣಿಕನನ್ನು ಬಂಧಿಸಿದೆ. ಆತನ ಲಗೇಜ್‌ನಲ್ಲಿದ್ದ ಸುಮಾರು 512 ಗ್ರಾಂ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ನಂತರ ಸಿಐಎಸ್‌ಎಫ್ ಬೆಂಗಳೂರಿನ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಮತ್ತು ಸ್ಥಳೀಯ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಯಿತು. ಆರೊಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಬಜ್ಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…