ಮಂಗಳೂರು : ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈ ಪ್ರಯಾಣಿಕ ನಿಂದ ಲಕ್ಷಾಂತರ ಮೌಲ್ಯದ ವಿದೇಶಿ ಕರೆನ್ಸಿಯನ್ನು ಸಿಐಎಸ್‌ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.
ಹ್ಯಾರಿ ಸ್ಟೆಫನ್ ಆಯಂತೋನಿ ಡಿಸೋಜ ಬಂಧಿತ ಆರೋಪಿ. ಆತನಿಂದ 5.88 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶಕ್ಕೆ ಪಡೆಯಲಾಗಿದೆ. ರವಿವಾರ ಸಂಜೆ 7 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ತೆರಳಲು ಯತ್ನಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ತಪಾಸಣೆ ನಡೆಸಿದರು.
ಪ್ರಯಾಣಿಕನಿಂದ 2.93 ಲಕ್ಷ ದಿರಾಂ, 2.94 ಲಕ್ಷ ಮೌಲ್ಯದ ಡಾಲರ್ ವಿದೇಶಿ ಕರೆನ್ಸಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ವೌಲ್ಯ 5.88 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈತನನ್ನು ವಿಚಾರಣೆಗೆ ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…