ಮಂಗಳೂರು: ತಿಂಗಳ ರಜೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ ವಿಪರೀತ ದಟ್ಟಣೆಯನ್ನು ಕಡಿಮೆ ಮಾಡಲು ರೈಲ್ವೆ ಇಲಾಖೆಯು ಮಂಗಳೂರು ಮಾರ್ಗವಾಗಿ ಸಂಚರಿಸುವ ಪ್ರಮುಖ ರೈಲುಗಳಿಗೆ ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ.
ಹೆಚ್ಚುವರಿ ಬೋಗಿ ಅಳವಡಿಸಲಾದ ರೈಲುಗಳ ವಿವರ ಇಂತಿವೆ.
ಎ.10 ಮತ್ತು 11 ರಂದು ಚೆನ್ನೈನಿಂದ ಹೊರಡುವ ಚೆನ್ನೈ ಎಗ್ಮೋರ್ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16159 ) ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಇರಲಿದೆ.
ಇದನ್ನೂ ಓದಿ :
ಎ. 12 ಮತ್ತು 13 ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ಮಂಗಳೂರು ಸೆಂಟ್ರಲ್ – ಚೆನ್ನೈ ಎಗ್ಮೋರ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16160 ) ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಅಳವಡಿಸಲಾಗುವುದು.
ಎ. 10, 11, 12, 14 ಮತ್ತು 15 ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ಮಾವೇಲಿ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್ – ತಿರುವನಂತಪುರಂ ಸೆಂಟ್ರಲ್ ರೈಲು (ರೈಲು ಸಂಖ್ಯೆ 16603 )ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಸೇರಿಸಲಾಗುವುದು.
ಎ. 11, 12, 13, 15 ಮತ್ತು 16 ರಂದು ತಿರುವನಂತಪುರಂ ಸೆಂಟ್ರಲ್ ಹೊರಡುವ ತಿರುವನಂತಪುರ ಸೆಂಟ್ರಲ್ – ಮಂಗಳೂರು ಸೆಂಟ್ರಲ್ ( ರೈಲು ಸಂಖ್ಯೆ 16604 ) ಮಾವೇಲಿ ಎಕ್ಸ್‌ಪ್ರೆಸ್ ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಇರಲಿದೆ.
ಇದನ್ನೂ ಓದಿ :
ಎ.8ರಿಂದ 15 ರವರೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಡುವ (ರೈಲು ಸಂಖ್ಯೆ 16630 )ಮಂಗಳೂರು ಸೆಂಟ್ರಲ್ – ತಿರುವನಂತಪುರಂ ಸೆಂಟ್ರಲ್ ಮಲಬಾರ್ ಎಕ್ಸ್‌ಪ್ರೆಸ್ ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಅಳವಡಿಸಲಾಗುವುದು.
ಎ.9 ರಿಂದ 16 ರವರೆಗೆ ತಿರುವನಂತಪುರಂನಿಂದ ಹೊರಡುವ ತಿರುವನಂತಪುರಂ – ಮಂಗಳೂರು ಸೆಂಟ್ರಲ್ (ಸಂಖ್ಯೆ 16629 ) ಮಲಬಾರ್ ಎಕ್ಸ್‌ಪ್ರೆಸ್ ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಅಳವಡಿಸಲು ನಿರ್ಧರಿಸ ಲಾಗಿದೆ ಎಂದು ರೈಲ್ವೆ ಇಲಾಖೆಯ ಪ್ರಕಟನೆ ತಿಳಿಸಿದೆ.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…