ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಅತಿಥಿ ಆಗಿ ಪ್ರಭಾಕರ್ ಭಟ್ ಆಹ್ವಾನಗೆ : SFI ಪ್ರತಿಭಟನೆ, ಇಬ್ಬರು ಪೊಲೀಸರ ವಶಕ್ಕೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಅತಿಥಿ ಆಗಿ ಪ್ರಭಾಕರ್ ಭಟ್ ಆಹ್ವಾನಗೆ : SFI ಪ್ರತಿಭಟನೆ, ಇಬ್ಬರು ಪೊಲೀಸರ ವಶಕ್ಕೆ – Vishwanews24

ಮಂಗಳೂರು ವಿವಿ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಪ್ರಭಾಕರ ಭಟ್ ಅತಿಥಿ ಆಗಿ ಆಹ್ವಾನಿಸಲಾಗಿತ್ತು. ಈ ಹಿನ್ನೆಲೆ, ಕಾರ್ಯಕ್ರಮಕ್ಕೆ ಪ್ರಭಾಕರ್ ಭಟ್ ಆಗಮಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಗೋಬ್ಯಾಕ್ ಎಂದು ಪ್ರತಿಭಟನೆ ನಡೆಸಲಾಗಿದೆ.

ಮಂಗಳೂರಿನಲ್ಲಿ SFI ವಿದ್ಯಾರ್ಥಿ ಸಂಘಟನೆಯಿಂದ ಧರಣಿ ನಡೆಸಲಾಗಿದೆ. ಬುರ್ಖಾ ಧರಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಭಾಗಿ ಆಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪೊಲೀಸರನ್ನು ತಳ್ಳಿಕೊಂಡು ಹೋಗಲು ವಿದ್ಯಾರ್ಥಿಗಳು ಯತ್ನಿಸಿದ್ದಾರೆ. ಈ ವೇಳೆ, ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.\

ಮಂಗಳೂರು ವಿಶ್ವವಿದ್ಯಾಲಯದ ಕಾರ್ಯಕ್ರಮಕ್ಕೆ ಪ್ರಭಾಕರ್ ಭಟ್ ಆಗಮಿಸುತ್ತಾರೆ ಎಂದು ತಿಳಿದು ಈ ಮೊದಲೇ ಅಪಸ್ವರ ಕೇಳಿಬಂದಿತ್ತು. ಕಲ್ಲಡ್ಕ ಪ್ರಭಾಕರ್ ಭಟ್ ಶಿಕ್ಷಣ ಸಂಸ್ಥೆಗೆ, ವಿಶ್ವವಿದ್ಯಾಲಯಕ್ಕೆ ಕರೆಸುವ ಬಗ್ಗೆ ವಿರೋಧ ವ್ಯಕ್ತವಾಗಿದ್ದವು. ಮಂಗಳೂರಿನ ಕೊಣಾಜೆಯಲ್ಲಿ ಇರುವ ವಿಶ್ವವಿದ್ಯಾಲಯದಲ್ಲಿ ಇಂದು (ಮಾರ್ಚ್ 30) ನಡೆಯುತ್ತಿರುವ ಕಾರ್ಯಕ್ರಮಕ್ಕೆ ಪ್ರಭಾಕರ ಭಟ್ ಭಾಗವಹಿಸಲು ಆಗಮಿಸಿದ್ದಾರೆ. ಈ ಹಿನ್ನೆಲೆ ಸಿಎಫ್​ಐ ವಿರೋಧ ವ್ಯಕ್ತಪಡಿಸಿದೆ. ವಿವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ‌ಮತ್ತು ಅತಿಥಿಯಾಗಿ ಪ್ರಭಾಕರ್ ಭಟ್ ಭಾಗಿ ಆಗಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡ ಪಾಕ್​​ ಪ್ರಧಾನಿ ಇಮ್ರಾನ್ ಖಾನ್ ; ರಾಜೀನಾಮೆ ಸಾಧ್ಯತೆ ! Vishwanews24

 

Leave a Reply