ಮಂಗಳೂರು ವಿವಿ  ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ಆಗಮನಕ್ಕೆ NSUI ತೀವ್ರ ವಿರೋಧ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು ವಿವಿ  ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ಆಗಮನಕ್ಕೆ NSUI ತೀವ್ರ ವಿರೋಧ

ಪ್ರತಿಭಾ ದಿನಾಚರಣೆ ಹಾಗೂ  ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ  ಶ್ರೀಕಾಂತ್ ಶೆಟ್ಟಿ ಕಾರ್ಕಳ ..

ಶ್ರೀಕಾಂತ್ ಶೆಟ್ಟಿ ಅತಿಥಿಯಾದರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುದಾಗಿ NSUI ಎಚ್ಚರಿಕೆ..

ಕಾರ್ಯಕ್ರಮವನ್ನು ಮುಂದೂಡಿದ ಮಂಗಳೂರು ವಿವಿ ಕಾಲೇಜು..

ಮಂಗಳೂರು: ಪ್ರತಿಭಾ ದಿನಾಚರಣೆ ಮತ್ತು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಅಪಸ್ವರ ಕೇಳಿಬಂದಿದೆ. ವಿವಾದದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮವನ್ನು ಮುಂದೂಡಿದ್ದು, ಎಂದಿನಂತೆ ತರಗತಿ ನಡೆಯಲಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಎನ್ಎಸ್​ಯುಐ ತೀವ್ರ ವಿರೋಧ

ಮಂಗಳೂರಿನ ಹಂಪನಕಟ್ಟೆ ಬಳಿಯ ವಿವಿ ಕಾಲೇಜುನಲ್ಲಿ ಜೂನ್ 23ರಂದು ಪ್ರತಿಭಾ ದಿನಾಚರಣೆ ಹಾಗೂ ಶನಿವಾರದ ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳರಿಗೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಇದಕ್ಕೆ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಉಡುಪಿ : ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ-  ವಿದ್ಯಾರ್ಥಿನಿ ಸಂಶಯಾಸ್ಪದ ಸಾವು – vishwanews24

ಕಾಲೇಜಿನಲ್ಲಿ ಕೋಮು ವಿಷಬೀಜ ಭಿತ್ತಲು ಯತ್ನ ಎಂಬ ಆರೋಪ ಕೇಳಿಬಂದಿದೆ. ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ ಅಂತ ಎಬಿವಿಪಿಗೆ ಎಚ್ಚರಿಕೆ ನೀಡಿದೆ. ಸದ್ಯ ಈ ವಿವಾದ ಎನ್ಎಸ್​ಯುಐ ಮತ್ತು ಎಬಿವಿಪಿ ವಿದ್ಯಾರ್ಥಿ ಸಂಘಟನೆಗಳ ಗುದ್ದಾಟಕ್ಕೆ ಕಾರಣವಾಗಿದೆ.

ಮಂಗಳೂರು ಕಮಿಷನರ್ ಹಾಗೂ ಕಾಲೇಜು ಪ್ರಾಂಶುಪಾಲರಿಗೂ ಎನ್ಎಸ್​ಯುಐ ದೂರು ನೀಡಿದ್ದು, ಶ್ರೀಕಾಂತ್ ಶೆಟ್ಟಿ ಅತಿಥಿಯಾದರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುದಾಗಿ ಎಚ್ಚರಿಕೆ ನೀಡಲಾಗಿದೆ.

BREAKING NEWS -ಶಾಸಕ ಯಶ್ಪಾಲ್ ಸುವರ್ಣಗೆ ಕೊಲೆ ಬೆದರಿಕೆ ಪ್ರಕರಣ : ಮತ್ತೊಂದು ಆರೋಪಿ ಮೊಹಮ್ಮದ್‌ ಆಸೀಫ್ ಬಂಧನ : vishwanews24

Leave a Reply