ಪ್ರತಿಭಾ ದಿನಾಚರಣೆ ಹಾಗೂ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಕಾಂತ್ ಶೆಟ್ಟಿ ಕಾರ್ಕಳ ..
ಶ್ರೀಕಾಂತ್ ಶೆಟ್ಟಿ ಅತಿಥಿಯಾದರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುದಾಗಿ NSUI ಎಚ್ಚರಿಕೆ..
ಕಾರ್ಯಕ್ರಮವನ್ನು ಮುಂದೂಡಿದ ಮಂಗಳೂರು ವಿವಿ ಕಾಲೇಜು..
ಮಂಗಳೂರು: ಪ್ರತಿಭಾ ದಿನಾಚರಣೆ ಮತ್ತು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಅಪಸ್ವರ ಕೇಳಿಬಂದಿದೆ. ವಿವಾದದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮವನ್ನು ಮುಂದೂಡಿದ್ದು, ಎಂದಿನಂತೆ ತರಗತಿ ನಡೆಯಲಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಮಂಗಳೂರಿನ ಹಂಪನಕಟ್ಟೆ ಬಳಿಯ ವಿವಿ ಕಾಲೇಜುನಲ್ಲಿ ಜೂನ್ 23ರಂದು ಪ್ರತಿಭಾ ದಿನಾಚರಣೆ ಹಾಗೂ ಶನಿವಾರದ ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳರಿಗೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಇದಕ್ಕೆ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಕಾಲೇಜಿನಲ್ಲಿ ಕೋಮು ವಿಷಬೀಜ ಭಿತ್ತಲು ಯತ್ನ ಎಂಬ ಆರೋಪ ಕೇಳಿಬಂದಿದೆ. ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ ಅಂತ ಎಬಿವಿಪಿಗೆ ಎಚ್ಚರಿಕೆ ನೀಡಿದೆ. ಸದ್ಯ ಈ ವಿವಾದ ಎನ್ಎಸ್ಯುಐ ಮತ್ತು ಎಬಿವಿಪಿ ವಿದ್ಯಾರ್ಥಿ ಸಂಘಟನೆಗಳ ಗುದ್ದಾಟಕ್ಕೆ ಕಾರಣವಾಗಿದೆ.
ಮಂಗಳೂರು ಕಮಿಷನರ್ ಹಾಗೂ ಕಾಲೇಜು ಪ್ರಾಂಶುಪಾಲರಿಗೂ ಎನ್ಎಸ್ಯುಐ ದೂರು ನೀಡಿದ್ದು, ಶ್ರೀಕಾಂತ್ ಶೆಟ್ಟಿ ಅತಿಥಿಯಾದರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುದಾಗಿ ಎಚ್ಚರಿಕೆ ನೀಡಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…