ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೊಂಕು ; ಸ್ನಾತಕೋತ್ತರ ತರಗತಿಗಳು ರದ್ದು -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೊಂಕು ; ಸ್ನಾತಕೋತ್ತರ ತರಗತಿಗಳು ರದ್ದು -Vishwanews24

ಮಂಗಳೂರು : ಮಂಗಳೂರಿನ ಹೊರವಲಯ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕೆಲ ವಿದ್ಯಾರ್ಥಿಗಳಲ್ಲಿ ಕೊರೊನಾ ಸೊಂಕು ಕಾಣಿಸಿಕೊಂಡ ಹಿನ್ನಲೆ ಇಲ್ಲಿನ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ ಎಂದು ವಿಶ್ವವಿದ್ಯಾನಿಲಯ ತಿಳಿಸಿದೆ. ಅಲ್ಲದೆ ವಿಶ್ವವಿದ್ಯಾಲಯ ಕಂಟೋನ್ಮೆಂಟ್ ಝೋನ್ ಮಾಡಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು, ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ತರಗತಿಗಳನ್ನು ರದ್ದುಗೊಳಿಸಲಾಗಿದೆ. ಮಾರ್ಚ್ 25 ರಿಂದ ಮಾರ್ಚ್ 29 ರವರೆಗೆ ವಿಶ್ವವಿದ್ಯಾಲಯ ಎಲ್ಲಾ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ.

ಇದನ್ನೂ ಓದಿ :ಬುರ್ಖಾ ಧರಿಸುವುದು ದುಷ್ಟಪದ್ದತಿ , ಮುಂದಿನ ದಿನಗಳಲ್ಲಿ ಬುರ್ಖಾ ನಿಷೇಧ : ಯುಪಿ ಸಚಿವ ಆನಂದ್‌‌ ಸ್ವರೂಪ್‌ ಶುಕ್ಲಾ -Vishwanews24

ಅಲ್ಲದೆ ವಿಶ್ವವಿದ್ಯಾನಿಲಯವನ್ನು ಕಂಟೈನ್ ಮೆಂಟ್ ಝೋನ್ ಆಗಿ ಘೋಷಿಸಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ನಲ್ಲೇ ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಅವರ ಆರ್​ಟಿಪಿಸಿಆರ್ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದರು.