ಮಂಗಳೂರು : ಮಂಗಳೂರಿನ ಹೊರವಲಯ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕೆಲ ವಿದ್ಯಾರ್ಥಿಗಳಲ್ಲಿ ಕೊರೊನಾ ಸೊಂಕು ಕಾಣಿಸಿಕೊಂಡ ಹಿನ್ನಲೆ ಇಲ್ಲಿನ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ ಎಂದು ವಿಶ್ವವಿದ್ಯಾನಿಲಯ ತಿಳಿಸಿದೆ. ಅಲ್ಲದೆ ವಿಶ್ವವಿದ್ಯಾಲಯ ಕಂಟೋನ್ಮೆಂಟ್ ಝೋನ್ ಮಾಡಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು, ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ತರಗತಿಗಳನ್ನು ರದ್ದುಗೊಳಿಸಲಾಗಿದೆ. ಮಾರ್ಚ್ 25 ರಿಂದ ಮಾರ್ಚ್ 29 ರವರೆಗೆ ವಿಶ್ವವಿದ್ಯಾಲಯ ಎಲ್ಲಾ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ.
ಅಲ್ಲದೆ ವಿಶ್ವವಿದ್ಯಾನಿಲಯವನ್ನು ಕಂಟೈನ್ ಮೆಂಟ್ ಝೋನ್ ಆಗಿ ಘೋಷಿಸಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ನಲ್ಲೇ ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಅವರ ಆರ್ಟಿಪಿಸಿಆರ್ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದರು.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…