Featured

ಮಂಗಳೂರು: ‘ವೀಕೆಂಡ್ ಕರ್ಫ್ಯೂ ಮರು ಪರಿಶೀಲಿಸಿ’ : ಯು.ಟಿ ಖಾದರ್ -Vishwanews24

ಮಂಗಳೂರು: ‘ವೀಕೆಂಡ್ ಕರ್ಫ್ಯೂ ಮರು ಪರಿಶೀಲಿಸಿ’ : ಯು.ಟಿ ಖಾದರ್ -Vishwanews24

ಮಂಗಳೂರು : ಜಿಲ್ಲೆಯಲ್ಲಿ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ಮರು ಪರಿಶೀಲಿಸುವಂತೆ ಶಾಸಕ ಯು ಟಿ ಖಾದರ್ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸಿದರು.

ಸೆಪ್ಟೆಂಬರ್ 6 ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಖಾದರ್, ” ವಾರಾಂತ್ಯ ಕರ್ಫ್ಯೂವಿನ ಹಿಂದಿನ ತರ್ಕ ಏನೆಂದು ಅರ್ಥವಾಗುತ್ತಿಲ್ಲ, ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಪಾದರಕ್ಷೆ, ಜವಳಿ ಮುಂತಾದ ಇತರ ಅಂಗಡಿಗಳಿಗೆ ಏಕೆ ಅನುಮತಿ ಇಲ್ಲ? ‘ಜಿಲ್ಲಾಡಳಿತವು ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಅನ್ನು ಮರುಪರಿಶೀಲಿಸಬೇಕು” ಎಂದು ಒತ್ತಾಯಿಸಿದರು.

“ರಾತ್ರಿಯ ಸಮಯದಲ್ಲಿ ಸಾಮಾಜಿಕ ಕೂಟಗಳನ್ನು ತಪ್ಪಿಸಲು ರಾತ್ರಿ ಕರ್ಫ್ಯೂ ವಿಧಿಸುವುದು ಉತ್ತಮ. ಆದರೆ ವಿಕೇಂಡ್ ಕರ್ಪ್ಯೂವಿನಿಂದ ಯಾವುದೇ ಪ್ರಯೋಜನವಿಲ್ಲ. ವಿಕೇಂಡ್ ಕರ್ಪ್ಯೂ ಇರೋ ಕಾರಣ ಜನರು ವಿಕೇಂಡ್ ಬದಲು ಶುಕ್ರವಾರ ಅಥವಾ ಸೋಮವಾರದಂದು ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ” ಎಂದು ಹೇಳಿದರು.

“ಟಾಸ್ಕ್ ಫೋರ್ಸ್ ಸಮಿತಿಯಲ್ಲಿರುವ ನಮ್ಮ ಶಾಸಕರೇ ಮುಖ್ಯಮಂತ್ರಿಗೆ ವಾರಾಂತ್ಯ ಕರ್ಫ್ಯೂ ಹಿಂಪಡೆಯಲು ಮನವಿ ಪತ್ರವನ್ನು ಸಲ್ಲಿಸುತ್ತಾರೆ. ಶಾಸಕರು ಮುಖ್ಯಮಂತ್ರಿಗೆ ಮನವಿ ಸಲ್ಲಿಸುವ ಮೂಲಕ ಜನರನ್ನು ಸಮಾಧಾನಪಡಿಸಲು ಮತ್ತು ಗೊಂದಲ ಸೃಷ್ಟಿಸಲು ಬಯಸುತ್ತಾರೆ” ಎಂದು ಆರೋಪಿಸಿದರು.

“ಒಂದು ವರ್ಷದ ಹಿಂದೆ ಅವರು ಜಿಲ್ಲೆಗೆ ಪಡಿತರದಲ್ಲಿ ಕುಚಲಕ್ಕಿಯನ್ನು ವಿತರಿಸಲು ಮತ್ತು ಜಿಲ್ಲೆಗೆ ಪ್ರತ್ಯೇಕ ಮರಳು ನೀತಿಯನ್ನು ತರಲು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಆದರೆ ಇದನ್ನು ಜಾರಿಗೊಳಿಸದೆ ಒಂದು ವರ್ಷವಾಗಿದೆ. ಸುಮ್ಮನೆ ಮನವಿ ಸಲ್ಲಿಸುವ ಬದಲು ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವ ಮೂಲಕ ಅದನ್ನು ಕಾರ್ಯಗತಗೊಳಿಸುವ ಕೆಲಸ ಮಾಡಬೇಕು” ಎಂದು ಖಾದರ್ ಒತ್ತಾಯಿಸಿದರು.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

1 hour ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

1 hour ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

3 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

4 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

5 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

5 hours ago