ಮಂಗಳೂರು: ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆಂಧ್ರ ಪ್ರದೇಶದ ಅನಂತಪುರದ ನಿವಾಸಿ ಹಾಗೂ ಹಾಲಿ ಅತ್ತಾವರದ ಅಪಾರ್ಟ್ ಮೆಂಟ್‌ನಲ್ಲಿ ವಾಸವಿರುವ ಡಾ| ರಾಘವ ದತ್ತಾ (28), ಇನ್ನೋರ್ವ ಆರೋಪಿ ಬೆಂಗಳೂರು ಹಲ್ಸೂರು ಜೋಡುಪಾಲ್ಯದ ನಿವಾಸಿ ಹಾಗೂ ಹಾಲಿ ಮಂಗಳೂರಿನ ಫಳ್ನೀರ್ ನಲ್ಲಿ ವಾಸವಿರುವ ಡಾ. ಬಾಲಾಜಿ (29) ಎಂದು ಗುರುತಿಸಲಾಗಿದೆ.
ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿ ಆರೋಪಿಗಳನ್ನು ಈ ಹಿಂದೆಯೇ ಬಂಧಿಸಲಾಗಿದ್ದು, ಮತ್ತೆ ಇಬ್ಬರ ಬಂಧನದೊಂದಿಗೆ ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 15ಕ್ಕೇರಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರಿಗೆ ಶುಕ್ರವಾರ ಮಾಹಿತಿ ನೀಡಿದರು.
ಪ್ರಕರಣದ ತನಿಖೆ ಮುಂದವರಿಸಲಾಗಿದ್ದು, ಮತ್ತಷ್ಟು ಜನರ ಬಂಧನದ ಸಾಧ್ಯತೆ ಇದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Join our Whatsapp group by clicking the below link 👇👇
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…