Featured

ಮಂಗಳೂರು : ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಪ್ರಕರಣ: ಮತ್ತೆ ಏಳು ಮಂದಿ ವಿದ್ಯಾರ್ಥಿಗಳು ಹಾಗೂ ಇಬ್ಬರು ವೈದ್ಯರ ಬಂಧನ – Vishwanews24

ಮಂಗಳೂರು : ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಪ್ರಕರಣ: ಮತ್ತೆ ಏಳು ಮಂದಿ ವಿದ್ಯಾರ್ಥಿಗಳು ಹಾಗೂ ಇಬ್ಬರು ವೈದ್ಯರ ಬಂಧನ

ಮಂಗಳೂರು: ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಮಾದಕ ದ್ರವ್ಯ ಪ್ರಕರಣದಲ್ಲಿ ಪೊಲೀಸರು ಬೇಟೆ ಮುಂದುವರಿಸಿದ್ದು, ಮತ್ತೆ ಏಳು ವಿದ್ಯಾರ್ಥಿಗಳು ಹಾಗೂ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ.

ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ನಗರದ ವಿವಿಧ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್ಸ್ ದಂಧೆಯನ್ನು ಪೊಲೀಸರು ಬೇಧಿಸಿದ್ದಾರೆ.

ಬಂಧಿತರನ್ನು ವಿದುಶ್ ಕುಮಾರ್, ಶರಣ್ಯಾ, ಸಿದ್ದಾರ್ಥ ಪವಾಸ್ಕರ್, ಸೂರ್ಯಜಿತ ದೇವ್, ಆಯುಷಾ ಮೊಹಮ್ಮದ್, ಪ್ರಣಯ್ ನಟರಾಜ್, ಚೈತನ್ಯ ಆರ್ ತುಮುಲುರಿ, ಸುಧೀಂದ್ರ ಮತ್ತು ಇಶಾ ಮಿಡ್ಡಾ ಎಂದು ಗುರುತಿಸಲಾಗಿದೆ.

ಪ್ರಕರಣದಲ್ಲಿ ಆರೋಪಿಗಳಾಗಿರುವ ನಗರದ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 7 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ ಇಬ್ಬರು ವೈದ್ಯರನ್ನು ಸೇವೆಯಿಂದ ಗುರುವಾರ ವಜಾಗೊಳಿಸಲಾಗಿದೆ.

3 ಪಟ್ಟು ಹೆಚ್ಚು ಬೆಲೆಗೆ ಮಾರಾಟ: ಆರೋಪಿಗಳ ಪೈಕಿ ಕೆಲವರು ಪೆಡ್ಲರ್‌ ಗಳು. ಇವರು ಮಾದಕ ದ್ರವ್ಯವನ್ನು ಹೊರಗಡೆಯಿಂದ ಕಡಿಮೆ ಬೆಲೆಗೆ ಖರೀದಿಸಿ ಮಂಗಳೂರಿನಲ್ಲಿ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿರುವುದು ಗೊತ್ತಾಗಿದೆ. ಆರೋಪಿಗಳನ್ನು ವಿಚಾರಿಸಿದಾಗ ಅವರು ಕಾಲೇಜು ಆವರಣದಿಂದ ಹೊರಗೆ ಪಿಜಿ, ಅಪಾರ್ಟ್‌ಮೆಂಟ್‌, ಬಾಡಿಗೆ ಮನೆಯಲ್ಲಿ ಮಾದಕ ದ್ರವ್ಯ ಸೇವನೆ, ಮಾರಾಟ ಮಾಡಿರುವುದು ತಿಳಿದುಬಂದಿದೆ. ತನಿಖೆ ಮುಂದುವರಿಸಲಾಗಿದೆ ಎಂದು ಆಯುಕ್ತರು ಗುರುವಾರ ತಿಳಿಸಿದ್ದರು.

ನಿಗಾ ಇಡಲು ಸೂಚನೆ: ನಗರದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದಾರೆ. ಪಿಜಿ, ಅಪಾರ್ಟ್‌ಮೆಂಟ್‌, ಬಾಡಿಗೆ ಮನೆಗಳಲ್ಲಿಯೂ ಉಳಿದುಕೊಂಡಿದ್ದಾರೆ. ಆದರೆ ಕೆಲವೆಡೆ ಅಕ್ರಮ ಚಟುವಟಿಕೆ ನಡೆಯುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಹೆಚ್ಚಿನ ನಿಗಾ ಇಡುವಂತೆ ಸ್ಥಳೀಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಿಜಿ, ಬಾಡಿಗೆ ಮನೆ ಮಾಲಕರಿಗೂ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೂಡ ತಮ್ಮ ಸುತ್ತಮುತ್ತ ನಡೆಯುವ ಚಟುವಟಿಕೆ ಗಮನಿಸಿ ಸಂಬಂಧಿಸಿದವರಿಗೆ ಮಾಹಿತಿ ನೀಡಬೇಕು ಎಂದು ಆಯುಕ್ತರು ಹೇಳಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

40 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 hour ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago