ಮಂಗಳೂರು: ವೈದ್ಯಕೀಯ ವಿದ್ಯಾರ್ಥಿ ಸಾವು ಪ್ರಕರಣ ;- ಸಿಬಿಐ ತನಿಖೆಗೆ ಸುಪ್ರೀಂ ಆದೇಶ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ವೈದ್ಯಕೀಯ ವಿದ್ಯಾರ್ಥಿ ಸಾವು ಪ್ರಕರಣ ;-ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂ ಆದೇಶ

ಮಂಗಳೂರು: 2014ರ ಮಾ.23ರಂದು ನಡೆದ ವೈದ್ಯಕೀಯ ವಿದ್ಯಾರ್ಥಿಯೋರ್ವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಮಂಗಳೂರಿನಲ್ಲಿ ವೈದ್ಯಕೀಯ ವಿದಾಭ್ಯಾಸ ಮಾಡುತ್ತಿದ್ದ ಕೇರಳ ಮೂಲಕ ರೋಹಿತ್ ರಾಧಾಕೃಷ್ಣನ್ ಅವರ ಮೃತದೇಹ 2014ರ ಮಾ.23ರಂದು ತಣ್ಣೀರುಬಾವಿ ಬೀಚ್‌ನ ರಸ್ತೆ ಬದಿ ಪೊದೆಗಳ ಬಳಿ ತಲೆ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಕಾಪು ಹೊಸ ಮಾರಿಗುಡಿಗೆ ಬಹುಭಾಷ ಚಿತ್ರನಟಿ – ರಾಜ್ಯ ಸಭಾ ಸದಸ್ಯೆ ಜಯಪ್ರಧಾ ಭೇಟಿ – vishwanews24

ಇನ್ನು ವಕೀಲರಾಗಿರುವ ರೋಹಿತ್ ಅವರ ತಂದೆ ಎಂ.ಎಸ್.ರಾಧಾಕೃಷ್ಣನ್ ಅವರು ಪ್ರಕರಣದ ಬಗ್ಗೆ ಸಂದೇಹ ವ್ಯಕ್ತಪಡಿಸಿ ಹೆಚ್ಚಿನ ತನಿಖೆಗೆ ಒತ್ತಾಯಿಸಿದ್ದರು. ಬಳಿಕ ಈ ಬಗ್ಗೆ ಸಿಐಡಿ ತನಿಖೆ ನಡೆಸಿತ್ತು. ಸಿಐಡಿ ತನಿಖೆಯ ಬಗ್ಗೆಯೂ ರಾಧಾಕೃಷ್ಣನ್ ಅವರು ಅಸಮಾಧಾನ ವ್ಯಕ್ತಪಡಿಸಿ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದು, ಇದೀಗ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿದೆ.

Leave a Reply