ಮಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ನೋವಿದ್ದ ಎಡಕಾಲಿನ ಬದಲು ಬಲಕಾಲಿಗೆ ಆಪರೇಶನ್ ಮಾಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ.
ಕಾಸರಗೋಡಿನ ಮಹಿಳೆಯೊಬ್ಬರು ಕೆಲದಿನದ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಅವರ ಬಲಕಾಲನ್ನು ಶಸಚಿಕಿತ್ಸೆ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದರು. ಅದರಂತೆ ಬೆಳಗ್ಗೆ ಆಪರೇಷನ್ ಥಿಯೇಟರ್‌ಗೆ ಕರೆದೊಯ್ಯಲಾಗಿತ್ತು. ಆದರೆ ಆಪರೇಷನ್ ಮಾಡಿ ಮರಳಿ ಬರುವಾಗ ಎಡಗಾಲಿಗೆ ಆಪರೇಷನ್ ಆಗಿರುವುದು ಮನೆಯವರ ಗಮನಕ್ಕೆ ಬಂದಿದೆ.
ಕುಟುಂಬಿಕರಿಗೆ ಶಾಕ್: ಮಹಿಳೆಯ ಬಲ ಕಾಲು ನೋವಿದ್ದು, ಎಡಗಾಲು ಆಪರೇಷನ್ ಮಾಡಿದ್ದನ್ನು ಕಂಡು ಕುಟುಂಬಿಕರಿಗೆ ಗರ ಬಡಿದಂತಾಗಿತ್ತು. ಕೂಡಲೇ ಆಸ್ಪತ್ರೆಯ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದು, ಪರಿಶೀಲನೆ ನಡೆಸಿದಾಗ ಕಿರಿಯ ವೈದ್ಯರು ಎಡವಟ್ಟು ಮಾಡಿರುವುದು ಗೊತ್ತಾಗಿದೆ.
ಕ್ಷಮಾಪಣೆ, ಪರಿಹಾರ ಭರವಸೆ: ಕೂಡಲೇ ಆಸ್ಪತ್ರೆಯ ಆಡಳಿತ ಮಂಡಳಿ ಗಮನಕ್ಕೆ ಬಂದಿದ್ದು, ಹಿರಿಯ ವೈದ್ಯರು ಬಂದು ಮಹಿಳೆಯ ಕುಟುಂಬಿಕರ ಬಳಿ ಕ್ಷಮೆ ಕೇಳಿದ್ದಾರೆ. ಇಷ್ಟು ಮಾತ್ರವಲ್ಲದೆ ಮಹಿಳೆಯ ಆಸ್ಪತ್ರೆಯ ಖರ್ಚು, ವೆಚ್ಚ ಸೇರಿದಂತೆ ಆದ ಎಡವಟ್ಟಿಗೆ ಪರಿಹಾರವನ್ನು ನೀಡುವುದಾಗಿ ಆಸ್ಪತ್ರೆ ಆಡಳಿತ ಮಂಡಳಿ ಭರವಸೆ ನೀಡಿದೆ.
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…