Featured

ಮಂಗಳೂರು- ವೈದ್ಯರ ಎಡವಟ್ಟು : ಬಲಕಾಲಿನ ಬದಲು ಎಡಕಾಲಿಗೆ ಶಸ್ತ್ರಚಿಕಿತ್ಸೆ -Vishwanews24

ಮಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ನೋವಿದ್ದ ಎಡಕಾಲಿನ ಬದಲು ಬಲಕಾಲಿಗೆ ಆಪರೇಶನ್ ಮಾಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ.

ಕಾಸರಗೋಡಿನ ಮಹಿಳೆಯೊಬ್ಬರು ಕೆಲದಿನದ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಅವರ ಬಲಕಾಲನ್ನು ಶಸಚಿಕಿತ್ಸೆ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದರು. ಅದರಂತೆ ಬೆಳಗ್ಗೆ ಆಪರೇಷನ್ ಥಿಯೇಟರ್‌ಗೆ ಕರೆದೊಯ್ಯಲಾಗಿತ್ತು. ಆದರೆ ಆಪರೇಷನ್ ಮಾಡಿ ಮರಳಿ ಬರುವಾಗ ಎಡಗಾಲಿಗೆ ಆಪರೇಷನ್ ಆಗಿರುವುದು ಮನೆಯವರ ಗಮನಕ್ಕೆ ಬಂದಿದೆ.

ಕುಟುಂಬಿಕರಿಗೆ ಶಾಕ್‌: ಮಹಿಳೆಯ ಬಲ ಕಾಲು ನೋವಿದ್ದು, ಎಡಗಾಲು ಆಪರೇಷನ್‌ ಮಾಡಿದ್ದನ್ನು ಕಂಡು ಕುಟುಂಬಿಕರಿಗೆ ಗರ ಬಡಿದಂತಾಗಿತ್ತು. ಕೂಡಲೇ ಆಸ್ಪತ್ರೆಯ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದು, ಪರಿಶೀಲನೆ ನಡೆಸಿದಾಗ ಕಿರಿಯ ವೈದ್ಯರು ಎಡವಟ್ಟು ಮಾಡಿರುವುದು ಗೊತ್ತಾಗಿದೆ.

ಕ್ಷಮಾಪಣೆ, ಪರಿಹಾರ ಭರವಸೆ: ಕೂಡಲೇ ಆಸ್ಪತ್ರೆಯ ಆಡಳಿತ ಮಂಡಳಿ ಗಮನಕ್ಕೆ ಬಂದಿದ್ದು, ಹಿರಿಯ ವೈದ್ಯರು ಬಂದು ಮಹಿಳೆಯ ಕುಟುಂಬಿಕರ ಬಳಿ ಕ್ಷಮೆ ಕೇಳಿದ್ದಾರೆ. ಇಷ್ಟು ಮಾತ್ರವಲ್ಲದೆ ಮಹಿಳೆಯ ಆಸ್ಪತ್ರೆಯ ಖರ್ಚು, ವೆಚ್ಚ ಸೇರಿದಂತೆ ಆದ ಎಡವಟ್ಟಿಗೆ ಪರಿಹಾರವನ್ನು ನೀಡುವುದಾಗಿ ಆಸ್ಪತ್ರೆ ಆಡಳಿತ ಮಂಡಳಿ ಭರವಸೆ ನೀಡಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago