ಮಂಗಳೂರು : ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಗೆ ಬಂದಿದ್ದ ತಾಯಿ ಮತ್ತು ಮಗು ಮೃತಪಟ್ಟ ಘಟನೆ ಶುಕ್ರವಾರ ನಡೆದಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ದೂರಿದ್ದಾರೆ.
ವಿಟ್ಲ ಮೂಲದ ಸವಿತಾ (33) ಎಂಬವರು ತುಂಬಾ ಗರ್ಭಿಣಿಯಾಗಿದ್ದು , ಹೆರಿಗೆಗಾಗಿ ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ಬಂದಿದ್ದರು. ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಸಂಜೆ ವೇಳೆ ತಾಯಿ ಕೂಡ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯವರು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡ ಸಂಬಂಧಿಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು, ಮೃತ ಮಹಿಳೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯ ಕಾರಣವಾಗಿದ್ದು ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ವೈದ್ಯರ ಜತೆ ಮಾತನಾಡುವಂತೆ ಸೂಚಿಸಿದ್ದೇನೆ. ಅವರು ವೈದ್ಯರೊಂದಿಗೆ ಮಾತನಾಡಿದ ಬಳಿಕ ನೀಡುವ ದೂರಿನಂತೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…