ಮಂಗಳೂರು: ಪೆಟ್ರೋಲ್ ಬಂಕ್‌ನ ಸೂಪರ್‌ವೈಸರ್ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯು ಆರ್ ಕೋಡ್ ಅನ್ನು ಹಾಕಿ ಬಂಕ್‌ಗೆ 58.85 ಲಕ್ಷ ರೂ. ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.
ಬಂಗ್ರಕೂಳೂರಿನ ರಿಲಯನ್ಸ್ ಔಟ್‌ಲೆಟ್ ಫ್ಯುಯೆಲ್ ಬಂಕ್‌ನಲ್ಲಿ ಸೂಪರ್‌ವೈಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಪಿ ಮೋಹನದಾಸ್, ಬಂಕ್‌ನ ಹಣಕಾಸು ವ್ಯವಹಾರ ನಿರ್ವಹಣೆಯ ಸಂಪೂರ್ಣ ಜವಬ್ದಾರಿ ನೋಡಿಕೊಂಡಿದ್ದ.
ಈತ 2023ರ ಮಾ. 1ರಿಂದ ಜು. 31ರ ವರೆಗೆ ಪೆಟ್ರೋಲ್ ಬಂಕ್‌ನಲ್ಲಿ ಬಂಕ್‌ನ ಕ್ಯುಆರ್ ಕೋಡ್ ತೆಗೆದು ತನ್ನ ವೈಯಕ್ತಿಯ ಖಾತೆಯ ಕ್ಯುಆರ್ ಕೋಡ್‌ನ್ನು ಅಳವಡಿಸಿ ಗ್ರಾಹಕರಿಗೆ ಬಂಕ್‌ನದ್ದೇ ಕ್ಯುಆರ್ ಕೋಡ್ ಎಂದು ನಂಬಿಸಿ 58,85,333 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ರಿಲಯನ್ಸ್ ಔಟ್‌ಲೆಟ್ ಫ್ಯುಯೆಲ್ ಬಂಕ್‌ನ ಮ್ಯಾನೇಜರ್ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…