ಮಂಗಳೂರು: ತಾಯಿಯಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ ಹೋಗಿ ಬರುತ್ತೇನೆಂದು ಹೇಳಿ ಬಟ್ಟೆ ಬರೆಗಳನ್ನು ತೆಗೆದುಕೊಂಡು ಮನೆಯಿಂದ ಹೋಗಿದ್ದ ಯುವಕನೋರ್ವ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೇರಳಕಟ್ಟೆಯ ಎಸ್ ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಮೊಹಮ್ಮದ್ ನಿಯಾಜ್ (33 ವರ್ಷ) ನಾಪತ್ತೆಯಾದ ಯುವಕ.
ನಿಯಾಜ್ ಆ.2ರಂದು ತನ್ನ ತಾಯಿ ಹಾಜಿರರವರಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದು ಅದೇ ದಿನ ಮಧ್ಯಾಹ್ನ ಆತನ ಹೆಂಡತಿ ಶಹಳಳಿಗೆ ಕರೆ ಮಾಡಿ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ನನ್ನ ತಂಗಿ ಮಗುವನ್ನು ನೋಡಲು ಹೋಗೋಣ ನೀನು ರೆಡಿಯಾಗಿರು ಎಂದು ತಿಳಿಸಿದ್ದಾರೆ. ನಂತರ ಶಹಳ ಮತ್ತೆ ಮೊಹಮ್ಮದ್ ನಿಯಾಜ್ ನಿಗೆ ಫೋನ್ ಕರೆ ಮಾಡಿದಾಗ ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಮೊಹಮ್ಮದ್ ನಿಯಾಜ್ ತನ್ನ ಮನೆಗೂ ಬಾರದೆ, ಹೆಂಡತಿಯ ಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ.
ಗೋಧಿ ಮೈ ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದ ಇವರು ಬ್ಯಾರಿ, ಕನ್ನಡ, ತುಳು, ಹಿಂದಿ, ಮಲಯಾಳಂ ಭಾಷೆಯನ್ನು ತಿಳಿದಿದ್ದಾರೆ. ಇವರು ನಾಪತ್ತೆಯಾದ ದಿನ ಬಿಳಿ ಬಣ್ಣದ ಪ್ರಿಂಟೆಡ್ ಶರ್ಟ್ ಹಾಗೂ ಕಪ್ಪು ಬಣ್ಣದ ಫಾರ್ಮಲ್ಸ್ ಪ್ಯಾಂಟ್ ಧರಿಸಿದ್ದರು ಎಂದು ತಿಳಿದುಬಂದಿದೆ. ಇವರ ಮಾಹಿತಿ ಸಿಕ್ಕಲ್ಲಿ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…