ಮಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
“ಇದೊಂದು ವ್ಯವಸ್ಥಿತ ಷಡ್ಯಂತ್ರ. ಶಾಲೆಯ ಕಾಂಪೌಂಡ್ ತನಕ ಹಿಜಾಬ್, ಬುರ್ಖಾ ಹಾಕಿಕೊಂಡು ಬರಲಿ. ಆದ್ರೆ, ಶಾಲೆ ಒಳಗೆ ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು. ರಾಜ್ಯದ ಶಾಲೆಯಲ್ಲಿ ವಸ್ತ್ರ ಸಂಹಿತೆ ಸಾಂಪ್ರದಾಯಿಕವಾಗಿ ಬಂದಿದೆ. ಕೆಲ ವಿದ್ಯಾರ್ಥಿಗಳನ್ನು ಮುಂದೆ ಬಿಟ್ಟು ಅರಾಜಕತೆ ಸೃಷ್ಟಿ ಮಾಡುವ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ಆದಿಯಾಗಿ ಕೆಲ ಸಂಘಟನೆಗಳು ಹಿಜಾಬ್ ವ್ಯಕ್ತಿ ಸ್ವಾತಂತ್ರ್ಯ ಎಂದು ಹೇಳುತ್ತಿದ್ದಾರೆ.
ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಮಸೀದಿ ಒಳಗೆ ಮಹಿಳೆಯರಿಗೆ ಪ್ರವೇಶ ಕೊಡಲಿ. ಮಹಿಳೆಯರಿಗೆ ಎಲ್ಲೂ ಪ್ರವೇಶ ನೀಡದವರು ಸರ್ಕಾರಿ ಶಾಲೆಯಲ್ಲಿ ಅವರದ್ದೇ ಆದ ಒಂದು ನಿಯಮ ಮಾಡ್ತಾರೆ. ತ್ರಿಬಲ್ ತಲಾಕ್ ರದ್ದು ಮಾಡುವ ಮೂಲಕ ಭದ್ರತೆ ಕೊಟ್ಟಿದ್ದು ಮೋದಿ ಸರ್ಕಾರ. ಇದನ್ನು ಮುಸ್ಲಿಂ ಮಹಿಳೆಯರು ಅರ್ಥ ಮಾಡಿಕೊಳ್ಳಬೇಕು. ಎಸ್.ಡಿ.ಪಿ.ಐ., ಸಿದ್ದರಾಮಯ್ಯ, ಖಾದರ್ ಹೇಳಿಕೆಯಿಂದ ಈ ರೀತಿ ಮಾಡಬೇಡಿ ಎಂದು ಸಚಿವ ಸುನಿಲ್ ಕುಮಾರ್ ಕಿವಿಮಾತು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…