Featured

ಮಂಗಳೂರು: ಶರಣ್​ ಪಂಪ್ವೆಲ್​, ಭರತ್ ಕುಮ್ಡೇಲ್​​ಗೆ ಜೀವ ಬೆದರಿಕೆ:  ಪ್ರಕರಣ ದಾಖಲು – vishwanews24

ಮಂಗಳೂರು: ಶರಣ್​ ಪಂಪ್ವೆಲ್​, ಭರತ್ ಕುಮ್ಡೇಲ್​​ಗೆ ಜೀವ ಬೆದರಿಕೆ:  ಪ್ರಕರಣ ದಾಖಲು

ಮಂಗಳೂರು : ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್​ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್​ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್​ಎಸ್ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಶರಣ್​ ಪಂಪ್ವೆಲ್​ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು.

ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್. ಶರಣ್ ಹತ್ಯೆಯಾಗಲು ತಯಾರಾಗು’’ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಬೆದರಿಕೆ ಹಾಕಲಾಗಿತ್ತು. ಶರಣ್ ಪಂಪ್ವೆಲ್ ಮಾತ್ರವಲ್ಲದೆ ಇನ್ನೂ ಕೆಲವು ಮಂದಿ ಮುಖಂಡರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಬೆದರಿಕೆ ಹಾಕಲಾಗಿದೆ.

ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಹತ್ಯೆ ಬೆದರಿಕೆ ಸಂದೇಶ ವಿಚಾರವಾಗಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್​ಎಸ್ ಕಾಯ್ದೆ 196(1)(C), 353(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ. ‘‘ಅಶ್ರಫ್ ಕೊಂದ ಭರತ್​ನನ್ನು ಮರೆತಿಲ್ಲ ಎಂದು ಕಿಡಿಗೇಡಿಗಳು ಪೋಸ್ಟ್ ಹಾಕಿದ್ದರು. ‘‘Wait and watch’’ ಎಂದು ತಲ್ವಾರ್ ಫೋಟೋ ಪೋಸ್ಟ್ ಮಾಡಿದ್ದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗಿರುವ ಸಂದರ್ಭದಲ್ಲೇ ಇಂತಹ ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಿಶ್ಚಿತತೆ ಸೃಷ್ಟಿಸಿವೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು ಸಾಮಾಜಿಕ ಮಾಧ್ಯಮಗಳಾಗಿ ಹರಿದಾಡಿದ್ದವು.

 

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

12 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

21 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

21 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

21 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

21 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago