ಮಂಗಳೂರು : ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್ಎಸ್ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಶರಣ್ ಪಂಪ್ವೆಲ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು.
ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್. ಶರಣ್ ಹತ್ಯೆಯಾಗಲು ತಯಾರಾಗು’’ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಬೆದರಿಕೆ ಹಾಕಲಾಗಿತ್ತು. ಶರಣ್ ಪಂಪ್ವೆಲ್ ಮಾತ್ರವಲ್ಲದೆ ಇನ್ನೂ ಕೆಲವು ಮಂದಿ ಮುಖಂಡರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಬೆದರಿಕೆ ಹಾಕಲಾಗಿದೆ.
ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಹತ್ಯೆ ಬೆದರಿಕೆ ಸಂದೇಶ ವಿಚಾರವಾಗಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್ಎಸ್ ಕಾಯ್ದೆ 196(1)(C), 353(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ. ‘‘ಅಶ್ರಫ್ ಕೊಂದ ಭರತ್ನನ್ನು ಮರೆತಿಲ್ಲ ಎಂದು ಕಿಡಿಗೇಡಿಗಳು ಪೋಸ್ಟ್ ಹಾಕಿದ್ದರು. ‘‘Wait and watch’’ ಎಂದು ತಲ್ವಾರ್ ಫೋಟೋ ಪೋಸ್ಟ್ ಮಾಡಿದ್ದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗಿರುವ ಸಂದರ್ಭದಲ್ಲೇ ಇಂತಹ ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಿಶ್ಚಿತತೆ ಸೃಷ್ಟಿಸಿವೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು ಸಾಮಾಜಿಕ ಮಾಧ್ಯಮಗಳಾಗಿ ಹರಿದಾಡಿದ್ದವು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…