ಮಂಗಳೂರು: ಮಂಗಳಾದೇವಿ ದೇವಸ್ಥಾನದಲ್ಲಿನ ವ್ಯಾಪಾರ ಕುರಿತ ಧರ್ಮ ದಂಗಲ್ ವಿಚಾರವಾಗಿ ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧದ ಪೊಲೀಸ್ ಎಫ್ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಮಂಗಳೂರಿನ ಪಾಂಡೇಶ್ವರ ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಶರಣ್ ಪಂಪ್ ವೆಲ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿ ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಿದೆ. ಮುಸ್ಲಿಮರ ಜೊತೆ ವ್ಯಾಪಾರ ಮಾಡದಂತೆ ಕರೆ ಕೊಟ್ಟಿದ್ದ ಹಿನ್ನೆಲೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಮಂಗಳಾದೇವಿ ಆವರಣದಲ್ಲಿರೋ ಹಿಂದೂಗಳ ಅಂಗಡಿಗಳ ಮುಂದೆ ಭಗವಾಧ್ವಜ ಅಳವಡಿಸಲಾಗಿತ್ತು. ಭಕ್ತರು ಹಿಂದೂಗಳ ಮಳಿಗೆಯಲ್ಲಿಯೇ ವ್ಯಾಪಾರ ಮಾಡಬೇಕೆಂಬ ಬ್ಯಾನರ್ ಹಾಕಲಾಗಿತ್ತು. ಈ ಹಿನ್ನೆಲೆ ಪಾಂಡವೇಶ್ವರ ಠಾಣೆಯ ಪೊಲೀಸರು ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು.
ಧರ್ಮ ದಂಗಲ್ ಹಿನ್ನೆಲೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಮಾನ ಮನಸ್ಕ ಸಂಘಟನೆಗಳಾದ ಜಾತ್ರಾ ವ್ಯಾಪಾರಸ್ಥರು, ಬೀದಿ ವ್ಯಾಪಾರಿಗಳು ಹಾಗೂ ಡಿವೈಎಫ್ಐ, ಎಡಪಂಥೀಯ ನಿಯೋಗ ಭೇಟಿಯಾಗಿತ್ತು. ಸಚಿವ ದಿನೇಶ್ ಗುಂಡೂರಾವ್ ಎದುರು ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅಸಮಾಧಾನ ವ್ಯಕ್ತಪಡಿಸಿದ್ದರು.
ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲು ಸಂಘಟನೆಗಳ ಸದಸ್ಯರು ಆಗ್ರಹಿಸಿದ್ದರು. ಆ ಬಳಿಕ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಕರೆದು ಕಾನೂನು ಕ್ರಮಕ್ಕೆ ದಿನೇಶ್ ಗುಂಡೂರಾವ್ ಸೂಚಿಸಿದ್ದರು. ಗುಂಡೂರಾವ್ ಸೂಚನೆ ಬೆನ್ನಲ್ಲೇ ಎಫ್ಐಆರ್ ದಾಖಲಾಗಿತ್ತು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…