ಮಂಗಳೂರು: ಮಂಗಳದೇವಿ ದೇವಸ್ಥಾನ ವಠಾರದಲ್ಲಿ ವ್ಯಾಪಾರಕ್ಕೆ ಸಂಬಂಧಿಸಿದ ಹೇಳಿಕೆ ನೀಡಿರುವ ವಿಹಿಂಪ ಪ್ರಾಂತ್ಯ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿತ್ತು. ಈ ಹಿನ್ನಲೆ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಮಧ್ಯೆ ಪ್ರವೇಶಿಸಿದ ಜಿಲ್ಲಾಡಳಿತ ಹಿಂದೂಯೇತರರಿಗೂ ಅಂಗಡಿ ಇಡಲು ಅನುಮತಿ ನೀಡಲಾಗಿತ್ತು. ಹೀಗಾಗಿ ಹಿಂದೂ ವ್ಯಕ್ತಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜ ಇಟ್ಟು ಎಲ್ಲಾ ಹಿಂದುಗಳು ಸಾಮಗ್ರಿಗಳನ್ನು ಹಿಂದುಗಳ ಅಂಗಡಿಗಳಿಂದಲೇ ಪಡೆದುಕೊಳ್ಳುವಂತೆ ಹೇಳಿಕೆ ನೀಡಿದ್ದರು. ಅ.16ರಂದು ಮಂಗಳಾದೇವಿಯ ರಥಬೀದಿಯ ಹಿಂದೂಗಳ ಸ್ಟಾಲ್ಗಳಿಗೆ ವಿಶ್ವ ಹಿಂದೂ ಪರಿಷತ್ ಭಗವಾನ್ಧ್ಬಜ ಕಟ್ಟಿದ್ದರು.
ಸಾಮರಸ್ಯಕ್ಕೆ ಧಕ್ಕೆ ಮಾಡಿದ್ದಾರೆ ಎಂದು ಪೊಲೀಸರು ಶರ ಪಂಪ್ ವೆಲ್ ವಿರುದ್ದ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ , ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…