ಮಂಗಳೂರು : ವಾಮಾಂಜೂರಿನಲ್ಲಿ ಶಾರದ ಉತ್ಸವಕ್ಕೆ ಹಾಕಿದ ಬ್ಯಾನರನ್ನು ಹರಿದು ಹಾಕಿ ನಾಶ ಮಾಡಿದ ಆರೋಪದ ಮೇಲೆ ಮೂವರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ವಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ಸ್ವಾಧೀನಪಡಿಸಿದ್ದಾರೆ.
ಆಕ್ಟೋಬರ್ 8 ರಂದು ಈ ಕೃತ್ಯ ನಡೆದಿದ್ದು ಮಧ್ಯರಾತ್ರಿ ಸಮಯ ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಈ ಕೃತ್ಯವನ್ನು ಎಸಗಿದ್ದರು. ಇದರಿಂದ ಮಂಗಳೂರಿನಲ್ಲಿ ಮತ್ತೆ ಕೋಮು ಭಾವನೆ ಹರಡುವ ಸಂಚನ್ನು ರೂಪಿಸಲಾಗಿತ್ತು ಎನ್ನಲಾಗಿದೆ.
ಇದನ್ನೂ ಓದಿ: ಮಂಗಳೂರು: ಹುಲಿ ವೇಷಧಾರಿ ಜಯಾನಂದ ಆಚಾರ್ಯ ಕೊಲೆ ಪ್ರಕರಣ : ಆರೋಪಿಯ ಬಂಧನ – Vishwanews24
ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಘಟನೆಯನ್ನು ಖಂಡಿಸಿ ಸಮಾನ ಮನಸ್ಕ ಹಿಂದು ಸಂಘಟನೆಗಳಿಂದ ಮಂಗಳವಾರ ಸಂತೆ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ನೈಜ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯ ಮಾಡಲಾಗಿತ್ತು. ಶಾರದಾ ಮಹೋತ್ಸವದ ಅಂಗವಾಗಿ ಹಾಕಲಾಗಿದ್ದ ವಾಮಂಜೂರ್ ಹುಲಿ ಯ ಫ್ಲೆಕ್ಸನ್ನು ನಾಶಮಾಡಿದ ಆರೋಪಿಗಳನ್ನು ಘಟನೆ ನಡೆದು ನಾಲ್ಕು ದಿನಗಳಾದರೂ ಬಂದಿಸದೇ ರಾಜಕೀಯ ಪ್ರಭಾವಿಗಳ ಒತ್ತಡಕ್ಕೇ ಮಣಿದಿರುವ ಮಂಗಳೂರು ಗ್ರಾಮಂತರ ಠಾಣೆಯ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಖಂಡನೆ ಕೂಡ ವ್ಯಕ್ತವಾಗಿತ್ತು.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…