Featured

ಮಂಗಳೂರು : ಶಾಲಾ ಪಠ್ಯಪುಸ್ತಕ ವಿಚಾರದಲ್ಲಿ ನಾರಾಯಣ ಗುರುಗಳಿಗೆ ಅವಮಾನ – ಬಿಲ್ಲವ ಸಮಾಜದಿಂದ ಹೋರಾಟ ; ಸರಕಾರಕ್ಕೆ ಎಚ್ಚರಿಕೆ ನೀಡಿದ ಬಿಲ್ಲವ ಮುಖಂಡರು – Vishwanews24

ಶಾಲಾ ಪಠ್ಯಪುಸ್ತಕ ವಿಚಾರದಲ್ಲಿ ನಾರಾಯಣ ಗುರುಗಳಿಗೆ ಅವಮಾನ – ಬಿಲ್ಲವ ಸಮಾಜದಿಂದ ಹೋರಾಟ ; ಸರಕಾರಕ್ಕೆ ಎಚ್ಚರಿಕೆ ನೀಡಿದ ಬಿಲ್ಲವ ಮುಖಂಡರು

ಮಂಗಳೂರು: ಶಾಲಾ ಪಠ್ಯಪುಸ್ತಕ ವಿಚಾರದಲ್ಲಿ ರಾಜ್ಯ ಸರಕಾರ ಮೇಲ್ವರ್ಗದವರನ್ನು ಓಲೈಸಿ, ಬ್ರಹ್ಮರ್ಷಿ ನಾರಾಯಣ ಗುರುಗಳನ್ನು ಅವಮಾನಿಸುತ್ತಿರುವ ಬಗ್ಗೆ ಶೀಘ್ರದಲ್ಲಿಯೇ ಬಿಲ್ಲವ ಸಮಾಜ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಬಿಲ್ಲವ ಸಮಾಜದ ಮುಖಂಡರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿಲ್ಲವ ಮುಖಂಡರು, ಶಾಲಾ ಪಠ್ಯಪುಸ್ತಕದಲ್ಲಿ ಬಸವಣ್ಣ, ಕುವೆಂಪು, ಅಂಬೇಡ್ಕರ್‌, ಭಗತ್‌ಸಿಂಗ್‌ ಗೆ ಅವಮಾನವಾಗಿದೆ ಎಂದು ರಾಜ್ಯವ್ಯಾಪಿ ಹೋರಾಟ ಆರಂಭವಾಯಿತು.

ಇದೇ ವೇಳೆ ಆದಿಚುಂಚನ ಮಠದ ಶ್ರೀಗಳು ಕುವೆಂಪು ವಿಚಾರದಲ್ಲಿ ಅಪಸ್ವರ ಎತ್ತಿದಾಗ ಸರಕಾರ ಅವರ ಬಳಿ ಓಗೊಡಲು ಹೋಯಿತು. ಜೊತೆಗೆ ಲಿಂಗಾಯಿತ ಸಮಾಜದ ಸ್ವಾಮಿಗಳು ವಿರೋಧ ವ್ಯಕ್ತಪಡಿಸಿದಾಗ ಸರಕಾರವೇ ಅವರ ಬಳಿ ಓಡಿಹೋಯಿತು.

ಆದರೆ ಪ್ರಾರಂಭದಲ್ಲಿ ಮುನ್ನೆಲೆಗೆ ಬಂದ ಬ್ರಹ್ಮರ್ಷಿ ನಾರಾಯಣ ಗುರುಗಳ ವಿಚಾರದಲ್ಲಿ ಸಮಾಜ ಸರಕಾರಕ್ಕೆ ಎಚ್ಚರಿಕೆ ನೀಡಿದರೂ, ಸಮಾಜ ಪಠ್ಯ ಪುಸ್ತಕದಲ್ಲಿ ಗುರುಗಳ ವಿಷಯ ಕೈ ಬಿಟ್ಟು ಹಿಂದುಳಿದ ಸಮುದಾಯಕ್ಕೆ ಅವಮಾನ ಮಾಡಿದೆ.

ಬ್ರಹ್ಮರ್ಷಿ ನಾರಾಯಣ ಗುರುಗಳ ಪಠ್ಯ ಕನ್ನಡ ಮಾಧ್ಯಮದಲ್ಲಿ ಐಚ್ಛಿಕವಾಗಿ ಪ್ರಥಮ ಭಾಷೆಯಾಗಿ ಕನ್ನಡ ಆಯ್ದುಕೊಂಡವರು ಮಾತ್ರ ಓದುತ್ತಾರೆ.

ಆದರೆ ಅದೇ ಐಚ್ಛಿಕ ಪ್ರಥಮ ಭಾಷೆಯಾಗಿ ಸಂಸ್ಕೃತ, ಹಿಂದಿ ತೆಗೆದುಕೊಂಡವರಿಗೆ ಇದು ಅಲಭ್ಯ. ಆದ್ದರಿಂದ ಈ ಪಠ್ಯ ಸಮಾಜ ಪುಸ್ತದಲ್ಲಿಯೇ ಇರಬೇಕು ಯಾಕೆಂದರೆ ಎಲ್ಲಾ ವಿದ್ಯಾರ್ಥಿಗಳು ಇದನ್ನು ಕಲಿಯಲು ಅವಕಾಶ ಸಿಗುತ್ತದೆ.

ಸಮಾಜ ಪಠ್ಯ ಪುಸ್ತಕದಲ್ಲಿ ಕೇವಲ ಹಿಂದುಳಿದ ವರ್ಗದ ಪೆರಿಯಾರ್‌ ಹಾಗೂ ನಾರಾಯಣ ಗುರುಗಳ ಪಠ್ಯ ಕೈಬಿಟ್ಟಿರುವುದು ದುದೃಷ್ಟಕರ ಹಾಗೂ ರಾಜ್ಯದಲ್ಲಿ 50 ಶೇಕಡಾ ಇರುವ ದಲಿತ, ಹಿಂದುಳಿದ ವರ್ಗಕ್ಕೆ ಮಾಡಿದ ಅಪಮಾನ, ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಗಣರಾಜ್ಯೋತ್ಸವದ ಪರೇಡ್‌ನ ಸ್ತಬ್ಧಚಿತ್ರದ ಅವಮಾನ, ಮಂಗಳೂರು ವಿಮಾನ ನಿಲ್ದಾಣಕ್ಕೆ ಅವಳಿ ವೀರರ ಕೋಟಿ-ಚೆನ್ನಯ್ಯ ಹೆಸರಿಡುವುದರಲ್ಲಿ ಸರಕಾರ ಅಸಡ್ಡೆ ತೋರಿಸಿದೆ. ಇದೀಗ ಪಠ್ಯ ಪುಸ್ತಕದಲ್ಲೂ ನಾರಾಯಣ ಗುರುಗಳನ್ನು ಅವಮಾನ ಮಾಡಿದೆ.

ಕುವೆಂಪು, ಬಸವಣ್ಣ ಪಠ್ಯದಲ್ಲಿ ಗೊಂದಲಗಳಾದಾಗ ಸರಿಪಡಿಸುತ್ತೇವೆ ಎಂಬ ಹೇಳಿಕೆ ನೀಡುವ ನೀವು ನಾರಾಯಣ ಗುರುಗಳ ವಿಷಯದಲ್ಲಿ ಯಾಕೆ ಮಾತನಾಡುವುದಿಲ್ಲ ಎಂದು ಸರಕಾರವನ್ನು ಪ್ರಶ್ನಿಸಿದರು. ಈಗಲಾದರೂ ಪೂರಕ ಪಠ್ಯ ಸೇರಿಸಬೇಕೆಂಬುವುದು ನಮ್ಮ ಹಕ್ಕೊತ್ತಾಯ.

ಇಲ್ಲದಿದ್ದರೆ ಈ ಬಗ್ಗೆ ಶೀಘ್ರದಲ್ಲಿ ಸಮಾಜದ ಮುಖಂಡರೊಂದಿಗೆ ಚರ್ಚಿಸಿ ಉಗ್ರ ಹೋರಾಟದ ರೂಪುರೇಷೆ ಮಾಡುತ್ತೇವೆ ಎಂದು ಎಚ್ಚರಿಸಿದರು.

ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್‌ ಸುರತ್ಕಲ್‌, ಗುರುಬೆಳದಿಂಗಳು ಇದರ ಅಧ್ಯಕ್ಷ ಆರ್‌.ಪದ್ಮರಾಜ್‌, ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

4 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

4 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

6 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

6 hours ago