ಮಂಗಳೂರು : ಶಾಲೆಗಳ ಮೈದಾನದಲ್ಲಿ ಯಾವುದೇ ರೀತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಶಿಕ್ಷಣ ಇಲಾಖೆ ನಿರ್ಬಂಧ ಹೇರಿರುವುದನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚಾದ ಮಂಗಳೂರು ದಕ್ಷಿಣ ಘಟಕದ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಗಡಿಯಾರ ಗೋಪುರದ ಬಳಿ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಯಿತು.
ಬಿಜೆಪಿ ದಕ್ಣಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಧಾರ್ಮಿಕ ಸ್ವಾತಂತ್ರ್ಯ ಹತ್ತಿಕ್ಕುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಹೋರಾಟ ಪ್ರಾರಂಭ ಮಾಡಿದ್ದು, ಇದನ್ನು ಹಳ್ಳಿ ಹಳ್ಳಿಗಳಲ್ಲೂ ಮಾಡುತ್ತೇವೆ ಎಂದರು. ಸರ್ಕಾರಿ ಶಾಲೆಗಳು ಕಾಂಗ್ರೆಸ್‌ನವರ ಅಪ್ಪನ ಆಸ್ತಿ ಅಲ್ಲ. ಶಾಲೆಗಳಲ್ಲಿ, ಹಾಗೂ ಅವುಗಳ ಮೈದಾನಗಳಲ್ಲಿ ನೂರಾರು ವರ್ಷಗಳಿಂದ ಗಣೇಶೋತ್ಸವ, ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಗಳು ನಡೆದುಕೊಂಡು ಬಂದಿವೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬಾಲಗಂಗಾಧರ ತಿಲಕ್ ಅವರ ನೇತೃತ್ವದಲ್ಲೇ ಸಾರ್ವಜನಿಕ ಗಣೇಶೋತ್ಸವ ಆಚರಣೆ ಶುರುವಾಗಿತ್ತು.
ಕೆಲವು ಶಾಲಾ ಮೈದಾನದಲ್ಲಿ ಹಿಂದಿನಿಂದಲೂ ಇಂತಹ ಆಚರಣೆಗಳು ನಡೆದುಕೊಂಡು ಬಂದಿವೆ. ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದಲ್ಲಿಯೂ ಶಾಲಾ ಮೈದಾನದಲ್ಲಿ ಇವುಗಳನ್ನು ನಡೆಸಲಾಗುತ್ತದೆ’ ಎಂದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…