Featured

ಮಂಗಳೂರು : ಶಾಲಾ ಮೈದಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ; ಭಜನೆ ಮಾಡುವ ಮೂಲಕ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ – vishwanews24

ಮಂಗಳೂರು : ಶಾಲೆಗಳ ಮೈದಾನದಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ನಿರ್ಬಂಧ ; ಭಜನೆ ಮಾಡುವ ಮೂಲಕ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

ಮಂಗಳೂರು : ಶಾಲೆಗಳ ಮೈದಾನದಲ್ಲಿ ಯಾವುದೇ ರೀತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಶಿಕ್ಷಣ ಇಲಾಖೆ ನಿರ್ಬಂಧ ಹೇರಿರುವುದನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚಾದ ಮಂಗಳೂರು ದಕ್ಷಿಣ ಘಟಕದ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಗಡಿಯಾರ ಗೋಪುರದ ಬಳಿ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಯಿತು.

ಬಿಜೆಪಿ ದಕ್ಣಿಣ ಕನ್ನಡ‌ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಧಾರ್ಮಿಕ ಸ್ವಾತಂತ್ರ್ಯ ಹತ್ತಿಕ್ಕುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಹೋರಾಟ ಪ್ರಾರಂಭ ಮಾಡಿದ್ದು, ಇದನ್ನು ಹಳ್ಳಿ ಹಳ್ಳಿಗಳಲ್ಲೂ ಮಾಡುತ್ತೇವೆ ಎಂದರು. ಸರ್ಕಾರಿ ಶಾಲೆಗಳು ಕಾಂಗ್ರೆಸ್‌ನವರ ಅಪ್ಪನ ಆಸ್ತಿ ಅಲ್ಲ.‌ ಶಾಲೆಗಳಲ್ಲಿ, ಹಾಗೂ ಅವುಗಳ ಮೈದಾನಗಳಲ್ಲಿ ನೂರಾರು ವರ್ಷಗಳಿಂದ ಗಣೇಶೋತ್ಸವ, ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಗಳು ನಡೆದುಕೊಂಡು ಬಂದಿವೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬಾಲಗಂಗಾಧರ ತಿಲಕ್‌ ಅವರ ನೇತೃತ್ವದಲ್ಲೇ ಸಾರ್ವಜನಿಕ ಗಣೇಶೋತ್ಸವ ಆಚರಣೆ ಶುರುವಾಗಿತ್ತು.

ಕೆಲವು ಶಾಲಾ ಮೈದಾನದಲ್ಲಿ ಹಿಂದಿನಿಂದಲೂ ಇಂತಹ ಆಚರಣೆಗಳು ನಡೆದುಕೊಂಡು ಬಂದಿವೆ. ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದಲ್ಲಿಯೂ ಶಾಲಾ ಮೈದಾನದಲ್ಲಿ ಇವುಗಳನ್ನು ನಡೆಸಲಾಗುತ್ತದೆ’ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago