ಮಂಗಳೂರು : ಶಾಸಕ ಯು.ಟಿ.ಖಾದರ್ ಹತ್ಯೆಗೆ ಸಂಚು :ಭದ್ರತೆಗೆ ಗೃಹ ಸಚಿವರ ಸೂಚನೆ -Vishwanews24

ಮಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನಲಾಗಿದ್ದು, ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿರುವ ಗೃಹಸಚಿವರು ಯು.ಟಿ.ಖಾದರ್ ಗೆ ಭದ್ರತೆ ಹೆಚ್ಚಿಸಲು ಆದೇಶ ನೀಡಿದ್ದಾರೆ.

ಗುಪ್ತಚರ ಇಲಾಖೆಯು ಯು.ಟಿ.ಖಾದರ್ ಹತ್ಯೆಗೆ ಸಂಚು ರೂಪಿಸುವ ಮಾಹಿತಿ ಪಡೆದಿತ್ತು. ಬಳಿಕ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಗೆ ಭದ್ರತೆ ನೀಡಬೇಕು ಎಂದು ಮಂಗಳೂರು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ ನೀಡಿದ್ದಾರೆ.

ಗುಪ್ತಚರ ಇಲಾಖೆ ಈ ವಿಚಾರ ತಿಳಿಸಿದ ಬೆನ್ನಲ್ಲೇ ಎಚ್ಚರಗೊಂಡ ಸರ್ಕಾರ ಖಾದರ್ ಅವರಿಗೆ ಭದ್ರತೆ ಹೆಚ್ಚು ಮಾಡಲು ಸೂಚಿಸಿದೆ. ಆದರೆ ಖಾದರ್ ನನಗೆ ಯಾವುದೇ ಜೀವಭಯ ಇಲ್ಲ ಎಂದು ಹೇಳಿ ಭದ್ರತೆಯನ್ನು ನಿರಾಕರಿಸಿದ್ದಾರೆ. ಭದ್ರತೆ ನಿರಾಕರಿಸಿದ ವಿಚಾರ ತಿಳಿದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯ ಮೂಲಕ ಖಾದರ್ ಅವರ ಮನ ಒಲಿಸಲು ಮುಂದಾಗಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಯು. ಟಿ. ಖಾದರ್, “ಒಬ್ಬ ಗನ್ ಮ್ಯಾನ್ ನೀಡುವುದಾಗಿ ಹೇಳಿದ್ದಾರೆ. ಒಬ್ಬ ಗನ್ ಮ್ಯಾನ್‌ನಿಂದ ರಕ್ಷಣೆ ಹೇಗೆ ಸಾಧ್ಯ?. ನಾನು ವಿವಿಧ ಜಿಲ್ಲೆಗಳಿಗೆ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಆದ್ದರಿಂದ, ಕಾರ್ಯಕ್ರಮದ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು” ಎಂದು

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

3 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

9 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

9 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

9 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

12 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

12 hours ago