ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ಮಡಿಕೇರಿ ವಸತಿಗೃಹದಲ್ಲಿ ನೇಣಿಗೆ ಶರಣು – Vishwanews24
ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ಮಡಿಕೇರಿ ವಸತಿಗೃಹದಲ್ಲಿ ನೇಣಿಗೆ ಶರಣು
ಕೊಡಗು: ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿ ವಸತಿಗೃಹದಲ್ಲಿ ನಡೆದಿದೆ.
ಶಿವಾನಂದ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಮಡಿಕೇರಿಯ ಹಳೆಯ ಬಸ್ ನಿಲ್ದಾಣದ ಬಳಿಯಿರುವ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಾನಂದ್ ಅವರು ಮಂಗಳೂರು ಬಜ್ಪೆ ಮೂಲದವರು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ನಗರ ಠಾಣೆಯ ಪೊಲೀಸರು ಪರಿಶೀಲನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮಡಿಕೇರಿ : ಎರಡು ಶಾಲಾ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ: ಹಲವು ಮಕ್ಕಳಿಗೆ ಗಾಯ – Vishwanews24
