Featured

ಮಂಗಳೂರು: ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ಹೊರಡಿಸಿದ ಮಾರ್ಗಸೂಚಿಗಳು – Vishwanews24

ಮಂಗಳೂರು: ಶಿಕ್ಷಣ ಸಂಸ್ಥೆಗಳಿಗಾಗಿ ಜಿಲ್ಲಾಡಳಿತ ಹೊರಡಿಸಿದ ಮಾರ್ಗಸೂಚಿಗಳು

ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ಸೇರಿದಂತೆ ಇತರೆ ಕಾರ್ಯಕ್ರಮಗಳ ನಿಷೇಧ

ಸಮಸ್ಯೆ ಪರಿಹಾರಕ್ಕೆ ಟೋಲ್ ಫ್ರೀ ಸಂಖ್ಯೆ ಆರಂಭ

ಮಂಗಳೂರು: ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19ರ ಕ್ಲಸ್ಟರ್‍ಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಮಾರ್ಗಸೂಚಿಗಳು:
ಮೆಡಿಕಲ್, ಪ್ಯಾರಮೆಡಿಕಲ್ ಇತರ ವೈದ್ಯಕೀಯ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಕೋವಿಡ್ ಲಕ್ಷಣಗಳು ಇರುವ ಬಗ್ಗೆ ಪ್ರತಿ ದಿನ ಸ್ಕ್ರೀನಿಂಗ್ ಮಾಡಿಸಬೇಕು ಮತ್ತು ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಅಂತಹವರನ್ನು ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಯನ್ವಯ ಚಿಕಿತ್ಸೆಗೆ ಒಳಪಡಿಸಬೇಕು.

ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾಕೂಟ, ಸಾಮಾಜಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಮುಂದಿನ ಅದೇಶದವರೆಗೆ ನಿಷೇಧಿಸಲಾಗಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಸಮ್ಮೇಳನಗಳು, ಸಮಿನಾರ್‍ಗಳು, ಶೈಕ್ಷಣಿಕ ಕಾರ್ಯಕ್ರಮಗಳನ್ನು ಸಾಧ್ಯವಿದ್ದರೆ ಮುಂದೂಡುವುದು, ಪರ್ಯಾಯವಾಗಿ ಅದನ್ನು ವಚ್ರ್ಯೂವಲ್ ಮೂಲಕ ನಡೆಸಲು ಸೂಚಿಸಲಾಗಿದೆ.

ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಇತರ ಯಾವುದೇ ಕಾರ್ಯಮಗಳನ್ನು ನಡೆಸಬೇಕಾದಲ್ಲಿ ಕಡ್ಡಾಯವಾಗಿ ಜಿಲ್ಲಾಡಳಿತದಿಂದ ಪೂರ್ವಾನುಮತಿ ಪಡೆಯಬೇಕು.

ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಕ್ಯಾಂಪಸ್‍ನೊಳಗೆ ಕೋವಿಡ್ ಸಮುಚಿತ ವರ್ತನೆಗಳನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಕಾಳಜಿ ವಹಿಸಬೇಕು ಹಾಗೂ ಪೂರ್ಣ ಪ್ರಮಾಣದಲ್ಲಿ ಅನುμÁ್ಠನಿಸಲು ಅಗತ್ಯ ಕ್ರಮಕೈಗೊಳ್ಳಬೇಕು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಆರೋಗ್ಯ ವೃತ್ತಿಪರರು ಇತರ ಕ್ಷೇತ್ರಗಳಲ್ಲಿನ ವೃತ್ತಿಪರರಿಗೆ ಸಮ್ಮೇಳನಗಳು, ಸೆಮಿನಾರ್‍ಗಳು, ಸಿ.ಎಂ.ಇ ಸೆÀಷನ್‍ಗಳಿಗೆ ಆನ್‍ಲೈನ್ ಮೂಲಕ ಸಂದೇಶವನ್ನು ಕಳುಹಿಸುವಂತೆ ಕ್ರಮವಹಿಸಬೇಕು.

ಎಲ್ಲ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಪಾಲಕರೊಂದಿಗೆ ಚರ್ಚಿಸಿ ಭೌತಿಕ ಅಥವಾ ಆನ್‍ಲೈನ್ ಕ್ಲಾಸ್‍ಗಳ ನಡೆಸುವ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು.

ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ 5 ಖಚಿತ ಕೋವಿಡ್-19 ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಯನ್ನು ಒಂದು ವಾರ ಕಡ್ಡಾಯವಾಗಿ ಮುಚ್ಚಬೇಕು ಮತ್ತು ಆ ಶಿಕ್ಷಣ ಸಂಸ್ಥೆಯನ್ನು ಸ್ಯಾನಿಟೈಸ್ ಮಾಡಿಸಿ ಶುಚಿಗೊಳಿಸಬೇಕು.

ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ತಮ್ಮ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಆದಷ್ಟು ಬೇಗ ವ್ಯಾಕ್ಸಿನೇಷನ್ ಪಡೆಯಲು ಕ್ರಮಕೈಗೊಳ್ಳಬೇಕು.

ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಸಮಸ್ಯೆ ಅಥವಾ ಮಾಹಿತಿ ತಿಳಿದುಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಖೆಯ ಉಪನಿರ್ದೇಶಕರು ಪ್ರಾರಂಭಿಸಿರುವ ಹೆಲ್ಪ್‍ಲೈನ್ ಸಂಪರ್ಕ ಸೇವೆಯನ್ನು ಸಂಪರ್ಕಿಸಬಹುದಾಗಿದೆ.

ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19ರ ಕ್ಲಸ್ಟರ್‍ಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ (ಓಮಿಕ್ರಾನ್) ವೈರಾಣುವಿನ ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಜಿಲ್ಲಾದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತ 1973ರ ಕಲಂ 144 (3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಕಲಂ 4, 5 ಮತ್ತು 10 ರಂತೆ ಕ್ರಮ ಜರಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ಸಮಸ್ಯೆ ಪರಿಹಾರಕ್ಕೆ ಟೋಲ್ ಫ್ರೀ ಸಂಖ್ಯೆ ಆರಂಭ

ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಶಾಲೆಗಳ ಹಾಗೂ ವಿದ್ಯಾರ್ಥಿಗಳ ಕುರಿತು ಉಂಟಾಗುವ ಸಂದೇಹಗಳಿಗೆ ಸಕಾಲದಲ್ಲಿ ಸ್ಪಂದಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ.

ಸಹಾಯವಾಣಿಯು ಪ್ರತಿದಿನ ಕಚೇರಿ ಸಮಯದಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 5.30 ಗಂಟೆಯವರೆಗೆ (ಸರ್ಕಾರಿ ರಜಾ ದಿನಗಳನ್ನು ಹೊರತು ಪಡಿಸಿ) ಸಾರ್ವಜನಿಕರು ಶಿಕ್ಷಣ ಸಂಸ್ಥೆ, ವಿದ್ಯಾರ್ಥಿಗಳ ಕುರಿತು, ಸಲಹೆ ಸೂಚನೆ ಹಾಗೂ ಮಾಹಿತಿ ನೀಡಲು ಅಥವಾ ಪಡೆಯಲು ಈ ಉಚಿತ ಸಹಾಯವಾಣಿ (ಟೋಲ್ ಫ್ರೀ) 180042511017 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago