ಮಂಗಳೂರು,: ಶಿರವಸ್ತ್ರ ವಿವಾದ ಮಂಗಳೂರಿನಲ್ಲಿ ಮತ್ತೆ ಸುದ್ದಿಯಾಗಿದೆ. ಈ ವಿವಾದ ಮಂಗಳೂರಿನ ಆಗ್ನೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಕಿಗೆ ಬಂದಿದೆ.
ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾದ ವಿದ್ಯಾರ್ಥಿನಿಗೆ ಶಿರವಸ್ತ್ರ ಧರಿಸಿದ್ದಕ್ಕೆ ದ್ವಿತೀಯ ವರ್ಷದ ದಾಖಲಾತಿ ನಿರಾಕರಿಸಿದ ಘಟನೆ ನಗರದ ಸಂತ ಆಗ್ನೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಕಿಗೆ ಬಂದಿದೆ. ಇದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.
ಈ ಬಾರಿ ಪ್ರಥಮ ಪಿಯು ಫಲಿತಾಂಶ ಬಂದ ನಂತರ ದ್ವಿತೀಯ ಪಿಯುಗಾಗಿ ದಾಖಲಾತಿಗೆಂದು ತಾಯಿಯೊಂದಿಗೆ ಕಾಲೇಜಿಗೆ ಹೋದ ಉಡುಪಿ ಜಿಲ್ಲೆಯ ಉಚ್ಚಿಲದ ವಿದ್ಯಾರ್ಥಿನಿ ಫಾತಿಮಾ ಫಾಝಿಲಾಗೆ ಆಘಾತ ಕಾದಿತ್ತು.
ಕಾಲೇಜಿನ ಪ್ರಾಂಶುಪಾಲರು ಶಿರವಸ್ತ್ರ ತೆಗೆದು ಕಾಲೇಜಿಗೆ ಬರುವುದಾದರೆ ದಾಖಲಾತಿ ನೀಡುತ್ತೇವೆ. ಇಲ್ಲದಿದ್ದರೆ ಈ ಕಾಲೇಜಿನಲ್ಲಿ ದಾಖಲಾತಿಗೆ ಅವಕಾಶ ನೀಡುವುವಿಲ್ಲ ಎಂದಿದ್ದಾರೆ. ಇದರಿಂದ ವಿದ್ಯಾರ್ಥಿನಿ ಆಘಾತಕ್ಕೆ ಒಳಗಾಗಿದ್ದಾಳೆ.
ಬಳಿಕ ಹಲವು ಬಾರಿ ಪೋಷಕರೊಂದಿಗೆ ವಿದ್ಯಾರ್ಥಿನಿ ಪ್ರಾಂಶುಪಾಲರನ್ನು ಭೇಟಿಯಾಗಿದ್ದಾರೆ. ಶಿರವಸ್ತ್ರದೊಂದಿಗೆ ದಾಖಲಾತಿಗೆ ಮನವಿ ಮಾಡಿದರೂ ಕೂಡ ಪ್ರಾಂಶುಪಾಲರು ನಿಲುವನ್ನು ಬದಲಾಯಿಸಲಿಲ್ಲ ಎಂದು ಹೇಳಲಾಗಿದೆ. ಕೊನೆಗೆ ಪೋಷಕರು ದಾಖಲಾತಿ ನಿರಾಕರಣೆಗೆ ಲಿಖಿತ ರೂಪದಲ್ಲಿ ಕಾರಣ ನೀಡಿ ಎಂದು ಕೇಳಿಕೊಂಡರೂ ಸ್ಪಂದಿಸದೆ ಟಿಸಿ ಬರೆದು ಕೊಡುತ್ತೇವೆ ಎಂದು ಎಚ್ಚರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನೊಂದ ವಿದ್ಯಾರ್ಥಿನಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಅಪರ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.ತಾನು ತನ್ನ ಶಿಕ್ಷಣವನ್ನು ಅರ್ಧದಲ್ಲಿ ಮೊಟಕುಗೊಳಿಸುವಂತಾಗಿದ್ದು, ಈ ಬಗ್ಗೆ ಸೂಕ್ತ ನ್ಯಾಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕಳೆದ ವರ್ಷ ಈ ಕಾಲೇಜಿನ ಪದವಿ ವಿಭಾಗದಲ್ಲಿ ವಿದ್ಯಾರ್ಥಿನಿಯರಿಗೆ ಶಿರವಸ್ತ್ರ ನಿಷೇಧಿಸಲಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…