Featured

ಮಂಗಳೂರು : ಶಿರಾಡಿಘಾಟ್​ನಲ್ಲಿ ಸುರಂಗ ಮಾರ್ಗ ಯೋಜನೆ ಸಾಧ್ಯವಿಲ್ಲ : ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ – Vishwanews24

ಮಂಗಳೂರು : ಶಿರಾಡಿಘಾಟ್​ನಲ್ಲಿ ಸುರಂಗ ಮಾರ್ಗ ಯೋಜನೆ ಸಾಧ್ಯವಿಲ್ಲ : ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ

ಮಂಗಳೂರು: ಶಿರಾಡಿ ಘಾಟ್​ನಲ್ಲಿ ಸುರಂಗ ಮಾರ್ಗ ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಇಂದಿನ ಸ್ಥಿತಿಗತಿ ಕುರಿತು ಕೇಳಿದ ಪ್ರಶ್ನೆಗೆ ಲೋಕಸಭೆಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಉತ್ತರಿಸುವ ಮೂಲಕ ಸ್ಪಷ್ಟನೆ ನೀಡಿದ್ದಾರೆ

ಹಾಗಾಗಿ ಸದ್ಯಕ್ಕೆ ಹಾಸನ ಮತ್ತು ದಕ್ಷಿಣ ಕನ್ನಡದ ನಡುವೆ ಸಂಪರ್ಕ ಕಲ್ಪಿಸುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿ ಘಾಟ್​ನಲ್ಲಿನಿರ್ಮಿಸಲು ಉದ್ದೇಶಿಸಿರುವ ಹಸಿರು ಸುರಂಗ ಮಾರ್ಗ ಯೋಜನೆ ಸಾಧ್ಯವಿಲ್ಲ, ಇದರ ಬದಲಾಗಿ ಶಿರಾಡಿ ಘಾಟ್​ನಲ್ಲಿ ​​26-ಕಿಮೀ ಘಾಟ್ ಸ್ಟ್ರೆಚ್‌ನಲ್ಲಿ ಚತುಷ್ಪಥ ರಸ್ತೆಗಾಗಿ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲಾಗುತ್ತಿದೆ ಎಂದಿದ್ದಾರೆ.

ಈ ಬಗ್ಗೆ ಶಿರಾಡಿ ಘಾಟ್ ವಿಭಾಗದಲ್ಲಿ ಸುರಂಗಗಳ ನಿರ್ಮಾಣವು ಬೃಹತ್ ಹೂಡಿಕೆಯನ್ನು ಒಳಗೊಂಡಿದೆ. ಆ ಹೂಡಿಕೆಗೆ ಮತ್ತು ಅಲ್ಲಿ ಸುರಂಗದ ಕಾಮಗಾರಿ ಮಾಡಲು ತೊಂದರೆ ಎದುರಾಗಬಹುದು. ಶಿರಾಡಿ ಘಾಟ್​​ನಲ್ಲಿ ಸದ್ಯಕ್ಕೆ ಅಸ್ತಿತ್ವದಲ್ಲಿರುವ ದ್ವಿಪಥದ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲು ಸಚಿವಾಲಯವು ನಿರ್ಧರಿಸಿದೆ. ಇದಕ್ಕಾಗಿ NHAI ಈಗಾಗಲೇ DPR ಸಲಹೆಗಾರರನ್ನು ತೊಡಗಿಸಿಕೊಂಡಿದೆ. ಅದರ ವರದಿ ಪ್ರಗತಿಯಲ್ಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago