Categories: ಉಡುಪಿ

ಮಂಗಳೂರು : ಶೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ : ಸರಳ ಆಚರಣೆ : ಜಿಲ್ಲಾಧಿಕಾರಿ ಆದೇಶ -Vishwanews24

ಮಂಗಳೂರು : ಶೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಸರಳ ಆಚರಣೆ : ಜಿಲ್ಲಾಧಿಕಾರಿ ಆದೇಶ -Vishwanews24

ಮಂಗಳೂರು, : ಮಂಗಳೂರು ತಾಲೂಕಿನ ಪಾಂಡೇಶ್ವರದಲ್ಲಿರುವ ಶೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಜನವರಿ 3 ರಿಂದ ಜನವರಿ 8 ರವರೆಗೆ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿಯ ಬ್ರಹ್ಮಕಲಶೋತ್ಸವವನ್ನು ಸರ್ಕಾರದ ಕೋವಿಡ್-19 ಮಾರ್ಗಸೂಚಿಗಳನ್ವಯ ಸರಳವಾಗಿ ನೆರವೇರಿಸಲು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕರದ ಅಧ್ಯಕ್ಷನಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಎರಡನೇ ಕೋವಿಡ್-19 ಅಲೆಯನ್ನು ತಡೆಯಲು ಸಾರ್ವಜನಕ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವೆಂದು ಮನಗಂಡು ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಕಾರ್ಯಕ್ರಮದ ಆಯೋಜಕರು ದೇವಸ್ಥಾನದ ಆಡಳಿತಾಧಿಕಾರಿಯವರು ಕಾರ್ಯಕ್ರಮ ನಡೆಯುವಲ್ಲಿ ಸ್ಯಾನಿಟೈಸರ್ ಬಳಕೆ, ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಪಾಲನೆಗೆ ಕ್ರಮ ಕೈಗೊಳ್ಳಬೇಕು. ಕೊವೀಡ್-19 ಮಾರ್ಗಸೂಚಿಗಳು ಉಲ್ಲಂಘನೆಯಾದಲ್ಲಿ ಕಾರ್ಯಕ್ರಮದ ಆಯೊಜಕರು ಅಥವಾ ದೇವಸ್ಥಾನದ ಆಡಳಿತಾಧಿಕಾರಿಯವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು.

ಮುಖಗವಸನ್ನು ಧರಿಸದೇ ಇರುವ ಸಾರ್ವಜನಿಕರ ವಿರುದ್ಧ ನಿಯಮಾನುಸಾರ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು. ದೇವಾಲಯ ಪ್ರವೇಶಕ್ಕೆ ಹಾಗೂ ನಿರ್ಗಮನಕ್ಕೆ ಸೂಕ್ತ ವ್ಯವಸ್ಥೆಗಳನ್ನು ಮಾಡುವುದು ಹಾಗೂ ಸಾಮಾಜಿಕ ಅಂತರವನ್ನು ಪಾಲಿಸಲು ಅಗತ್ಯ ವ್ಯವಸ್ಥೆ ಮಾಡಬೇಕು.

ದೇವಾಲಯದ ಪ್ರವೇಶದಲ್ಲಿ ಹಾಗೂ ನಿರ್ಗಮನದಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಕೈ ತೊಳೆಯುವುದು ಮತ್ತು ಸ್ಯಾನಿಟೈಸರ್‍ಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಉತ್ಸವಾಚರಣೆ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು.

65 ವರ್ಷಕ್ಕಿಂತ ಮೇಲ್ಪಟ್ಟ ವಯೋಮಾನದ ವ್ಯಕ್ತಿಗಳು, ಬಹು ಅಸ್ಥಿತ್ವತೆ ಹೊಂದಿರುವ ವ್ಯಕ್ತಿಗಳು, ಗರ್ಭಿಣಿಯರು ಮತ್ತು ಹತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅಗತ್ಯ ಮತ್ತು ಆರೋಗ್ಯ ಉದ್ದೇಶಗಳನ್ನು ಹೊರತು ಪಡಿಸಿ ಮನೆಯಲ್ಲಿಯೇ ಇರಬೇಕು.

ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಇತರೆ ಇಲಾಖೆ ಅಥವಾ ಪಾಲಿಕೆ ಅಥವಾ ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.

ರಾಷ್ರ್ಟೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ ಅಥವಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು. ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

11 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

19 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

19 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

20 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

20 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

20 hours ago