ಮಂಗಳೂರು(Vishwanews24 ): ಶೂ ಮತ್ತು ಶರ್ಟ್ ಬಟನ್‌ನಲ್ಲಿ ಚಿನ್ನವನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕಾಸರಗೋಡು ಮೂಲದ ಅಬ್ದುಲ್ ಸಲಾಮ್ ಮಣಿಪಾರಂಬು ಮತ್ತು ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.
ಅಬ್ದುಲ್ ಸಲಾಮ್ ಅವರು ಶಾರ್ಜಾದಿಂದ ಬರುತ್ತಿದ್ದ ಇಂಡಿಗೋ ವಿಮಾನ, ಹಾಗೂ ಅಶ್ರಫ್ ಅವರು ದುಬೈನಿಂದ ಬರುವ ಏರ್ ಇಂಡಿಯಾ ವಿಮಾನದಿಂದ ಬಂದಿಳಿದಿದ್ದು, ಜೀನ್ಸ್ ಅಂಗಿ ಗುಂಡಿ ಚಿನ್ನವನ್ನು ಮರೆಮಾಚುವ ಮೂಲಕ ಮತ್ತು ಶೂಗಳಲ್ಲಿ ಚಿನ್ನದ ಸರಪಣಿಗಳನ್ನು ಇಟ್ಟುಕೊಂಡು ಕಳ್ಳಸಾಗಣೆ ಮಾಡುತ್ತಿದ್ದರು ಎನ್ನಲಾಗಿದೆ.
ಬಂಧಿತರಿಂದ 26,43,840 ರೂ.ಗಳ ಮೌಲ್ಯದ, 576 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.ಕಾರ್ಯಾಚರಣೆಯ ನೇತೃತ್ವವನ್ನು ಪ್ರವೀಣ್ ಕಂಡಿ, ರಾಕೇಶ್, ಸಿ.ಎಂ. ಮೀನಾ ಮತ್ತು ಆಶಿಶ್ ವರ್ಮಾ ವಹಿಸಿದ್ದರು.
ಉಡುಪಿ:ಗಿರಿಜಾ ಅತ್ತಿಗೇರಿ ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಪಿ.ಎಚ್.ಡಿ ಪ್ರದಾನ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…