Featured

ಮಂಗಳೂರು: ಶ್ರೀನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು, ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ವಿಷಾದನೀಯ : ಬಿರುವೆರ್ ಕುಡ್ಲ – Vishwanews24

ಮಂಗಳೂರು: ಶ್ರೀನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು, ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ವಿಷಾದನೀಯ..

ಕೇರಳ ಸರಕಾರದ ಧೋರಣೆಯಿಂದ ರದ್ದಾಗಿದೆ ವಿನ: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಎನ್ನುವ ಕಾರಣಕ್ಕೆ ಕೇಂದ್ರ ಸರಕಾರ ರದ್ದು ಮಾಡಿಲ್ಲ..

ಮಂಗಳೂರು: ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂದು ಬೋಧಿಸಿದ ಶ್ರೀನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು, ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ವಿಷಾದನೀಯ ಎಂಬುದಾಗಿ ಬಿರುವೆರ್ ಕುಡ್ಲ ತಿಳಿಸಿದೆ.

ಶ್ರೀನಾರಾಯಣ ಗುರುಗಳು ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿನ ವಿರುದ್ಧ ಹೋರಾಟ ನಡೆಸಿದವರು. ಶ್ರೀ ಗುರುಗಳು ಸಮಾಜಕ ಸುಧಾರಕರಾಗಿ ಸಮಾಜದ ತಾರತಮ್ಯಗಳನ್ನು ನಿವಾರಿಸುವ ಜೊತೆಗೆ ಸಮಾಜದಲ್ಲಿ ಧರ್ಮ, ಅಧ್ಯಾತ್ಮ ಜಾಗೃತಿಯನ್ನೂ ಮೂಡಿಸಿದ ಮಹಾತ್ಮರು. ಗಣರಾಜ್ಯೋತ್ಸವಕ್ಕಾಗಿ ಕೇರಳ ಸರಕಾರ ಕಳುಹಿಸಿದ ಇವರ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ಕಡೆಗಣಿಸಿದೆ ಎಂಬ ಆರೋಪದ ಮೂಲಕ ವಿವಾದ ಸೃಷ್ಟಿಸಿ ಹೇಗಾದರೂ ಮಾಡಿ ಅಧಿಕಾರ ಪಡೆಯಬೇಕೆಂಬ ಉದ್ದೇಶದಿಂದ ಇರುವ ಪಕ್ಷಗಳು ಜನರ ಮನಸ್ಸಿನಲ್ಲಿ ಗೊಂದಲ ಉಂಟು ಮಾಡಲೆತ್ನಿಸುತ್ತಿರುವುದು ಖಂಡನೀಯ. ಸುಳ್ಳು ಪ್ರಚಾರದ ಮೂಲಕ ಜನರ ನಡುವೆ ಒಡಕುಂಟು ಮಾಡಲು ಮುಂದಾಗಿರುವುದು ಖೇದಕರ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದು, ಇಂತಹ ಹುನ್ನಾರಗಳ ವಿರುದ್ಧ ಜನತೆ ಎಚ್ಚರಿಕೆಯಿಂದ ಇರಬೇಕು.

ಗಣರಾಜ್ಯೋತ್ಸವ ದಿನದಂದು ದಿಲ್ಲಿಯ ರಾಜಪಥದಲ್ಲಿ ಸಾಗುವ ಟ್ಯಾಬ್ಲೆಗಳ ಆಯ್ಕೆಗಾಗಿ ಕೆಲವು ಮಾರ್ಗದರ್ಶಿ ಸೂತ್ರಗಳಿವೆ.ಕೇಂದ್ರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ನಿರ್ಲಕ್ಷ್ಯ ಮಾಡಿದೆ. ಕೇರಳ ಸರಕಾರದ ಧೋರಣೆಯಿಂದ ರದ್ದಾಗಿದೆ ವಿನ: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಎನ್ನುವ ಕಾರಣಕ್ಕೆ ಕೇಂದ್ರ ಸರಕಾರ ರದ್ದು ಮಾಡಿಲ್ಲ ಎಂಬುದು ವಾಸ್ತವ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಬ್ರಹಗಳ ಧೈಯ ವಾಕ್ಯವನ್ನು ಪರಿಪಾಲಿಸುವ ಅವರ ಮಾರ್ಗದರ್ಶನ ಅನುಸರಿಸುವ ನಾಯಕರಾಗಿದ್ದಾರೆ.

ಗಣರಾಜ್ಯೋತ್ಸವದಂದು ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರದ ಮೆರವಣಿಗೆಗೆ ನಮ್ಮೆಲ್ಲರ ಬೆಂಬಲವಿದೆ.ಈ ಮೂಲಕ ಶ್ರೀನಾರಾಯಣ ಗುರುಗಳ ಮೇಲೆ ಇಟ್ಟಿರುವ ಅಭಿಮಾನ, ಭಕ್ತಿ ಪ್ರಪಂಚಕ್ಕೆ ಮಾದರಿಯಾಗುವಂತೆ ಆಗಲಿ ಎಂಬುದಾಗಿ ನಮ್ಮ ಹಾರೈಕೆ.

ಸುದ್ದಿಗೋಷ್ಟಿಯಲ್ಲಿ ಬಿರುವೆರ್ ಕುಡ್ಲದ ಸಹನಾ ಕುಂದರ್, ವಿದ್ಯಾ ರಾಕೇಶ್, ರಾಕೇಶ್ ಸಾಲ್ಯಾನ್, ಲಕ್ಷ್ಮೀಶ್ ಸುವರ್ಣ, ಕಿಶೋರ್ ಬಾಬು, ಪ್ರಾಣೇಶ್ ಬಂಗೇರ, ಕಿರಣ್, ರಕ್ಷಿತ್ ಸುವರ್ಣ ಉಪಸ್ಥಿತರಿದ್ದರು.

Vishwa News 24

Recent Posts

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

8 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

47 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago