Featured

ಮಂಗಳೂರು: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಮಂಗಳೂರಿನಲ್ಲಿ 2019ರಲ್ಲಿ ನಡೆದಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಎಚ್. ಎಸ್. ಅವರು ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ (ಸೆ .24) ತೀರ್ಪು ನೀಡಿದ್ದಾರೆ.

ಜೋನಸ್ ಸ್ಯಾಮ್ಸನ್ ಮತ್ತು ಆಕೆಯ ಪತ್ನಿ ವಿಕ್ಟೋರಿಯಾ ಮಥಾಯಸ್ ಜೀವಾವಧಿ ಶಿಕ್ಷೆಗೊಳಗಾದವರು. ಇವರಿಗೆ ಸಹಕರಿಸಿದ ಇನ್ನೋರ್ವ ಆರೋಪಿ ರಾಜು ಎಂಬಾತನಿಗೆ ಆರೂವರೆ ತಿಂಗಳ ಸಾದಾ ಸಜೆ ವಿಧಿಸಲಾಗಿದೆ.

ಕುರಿ ಚಿಟ್ ಫಂಡ್ ನಡೆಸುತ್ತಿದ್ದ ನಗರದ ಅತ್ತಾವರದ ಶ್ರೀಮತಿ ಶೆಟ್ಟಿಯವರಿಗೆ ಸೂಟರ್ ಪೇಟೆಯ ಜೋನಸ್ ನೀಡಬೇಕಾಗಿದ್ದ ಹಣವನ್ನು ಕೇಳಲು ಆತನ ಮನೆಗೆ ಹೋಗಿದ್ದಾಗ ಜೋನಸ್ ಮತ್ತು ವಿಕ್ಟೋರಿಯಾ ಆಕೆಯನ್ನು ಕೊಲೆ ಮಾಡಿದ್ದರು. ಆಕೆಯ ಮೈಮೇಲಿದ್ದ ಚಿನ್ನಾಭರಣವನ್ನು ಸುಲಿಗೆ ಮಾಡಿದ್ದರು. ಬಳಿಕ ದೇಹವನ್ನು 29 ತುಂಡುಗಳನ್ನಾಗಿ ಮಾಡಿದ್ದರು. ಅದನ್ನು ರಾತ್ರಿ ಜೋನಸ್ ನಗರದ ಹಲವೆಡೆ ಎಸೆದು ಹೋಗಿದ್ದ.

ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ವಾದಿಸಿದ್ದರು.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago