Featured

ಮಂಗಳೂರು :  ಶ್ರೀಮತಿ ಶೆಟ್ಟಿ ಭೀಕರ ಕೊಲೆ ಪ್ರಕರಣ – ಮೂವರ ಅಪರಾಧ ಸಾಬೀತು ; 17ರಂದು ಶಿಕ್ಷೆ ಪ್ರಕಟ -vishwanews24

ಮಂಗಳೂರು :  ಶ್ರೀಮತಿ ಶೆಟ್ಟಿ ಭೀಕರ ಕೊಲೆ ಪ್ರಕರಣ – ಮೂವರ ಅಪರಾಧ ಸಾಬೀತು ;  17ಕ್ಕೆ ಶಿಕ್ಷೆ ಪ್ರಕಟ

ಮಂಗಳೂರು : ಇಡೀ ದಕ್ಷಿಣಕನ್ನಡ ಜಿಲ್ಲೆಯನ್ನು ಬೆಚ್ಚಿಬಿಳಿಸಿದ್ದ 2019ರಲ್ಲಿ ನಡೆದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.

ಸೆಮಿನರಿ ಕಂಪೌಂಡ್‌, ಅತ್ತಾವರ ನ್ಯೂರೋಡ್‌ ಕಂಕನಾಡಿಯ ಮೂಲ ನಿವಾಸಿಯಾಗಿರುವ ಜೋನಸ್‌ ಸ್ಯಾಮ್ಸನ್‌ ಅಲಿಯಾಸ್‌ ಜೋನಸ್‌ ಜೌಲಿನ್‌ ಸ್ಯಾಮ್ಸನ್‌, ಅವರ ಪತ್ನಿ ವೆಲೆನ್ಸಿಯಾದ ವಿಕ್ಟೋರಿಯಾ ಮಥಾಯಿಸ್‌ ಹಾಗೂ ಕುಂಜತ್‌ಬೈಲ್‌ ಮರಕಡ ಗ್ರಾಮ ತಾರಿಪಾಡಿ ಗುಡ್ಡೆಯ ರಾಜು ಘೋಷಿತ ಆರೋಪಿಗಳು. ಇವರಿಗೆ ಶಿಕ್ಷೆ ಪ್ರಮಾಣವನ್ನು ಇದೇ 17ರಂದು ಪ್ರಕಟಿಸಲಿದೆ.

ಶ್ರೀಮತಿ ಶೆಟ್ಟಿ ಅತ್ತಾವರ ಸಮೀಪ ಎಲೆಕ್ಟ್ರಾನಿಕ್ಸ್ ಅಂಗಡಿ ಇಟ್ಟುಕೊಂಡಿದದ್ದರು, ಅಲ್ಲದೆ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದು, ಕೊಲೆ ಆರೋಪಿಗಳಲ್ಲಿ ಜೋನಸ್‌ ಸ್ಯಾಮ್ಸನ್‌ ಕುರಿಚಿಟ್‌ ಫಂಡ್‌ನಲ್ಲಿ ಎರಡು ಸದಸ್ಯತ್ವ ಹೊಂದಿದ್ದ. ಅವಧಿಗೆ ಮೊದಲೇ ಎರಡೂ ಸದಸ್ಯತ್ವದ ಹಣವನ್ನು ಪಡೆದುಕೊಂಡಿದ್ದ. ಮಾಸಿಕ ಕಂತು ಪಾವತಿಸಲು ವಿಫಲನಾಗಿದ್ದ. ಕಂತು ಪಾವತಿಸುವಂತೆ ಶ್ರೀಮತಿ ಶೆಟ್ಟಿ ಒತ್ತಾಯಿಸಿದ್ದರು.

2019 ಮೇ 11 ರಂದು ಶ್ರೀಮತಿ ಶೆಟ್ಟಿ ಹಣ ಕೇಳಲು ಸ್ಯಾಮ್ಸನ್ ಮನೆಗೆ ತೆರಳಿದ್ದರು, ಈ ವೇಳೆ ನಡೆದ ಗಲಾಟೆಯಲ್ಲಿ ಸ್ಯಾಮ್ಸನ್ ಶ್ರೀಮತಿ ಶೆಟ್ಟಿ ಅವರ ಮೇಲೆ ಮರದ ತುಂಡಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ನೆಲಕ್ಕೆ ಬಿದ್ದ ಶ್ರೀಮತಿ ಶೆಟ್ಟಿ ಅವರನ್ನು ಕೊಲೆ ಮಾಡಿ ಅವರ ಮೈಮೇಲಿದ್ದ ಚಿನ್ನಾಭರಣ ದೊಚಿ ಅವರನ್ನು ಮನೆಯಲ್ಲೇ ತುಂಡು ತಂಡು ಮಾಡಿ ನಗರದ ವಿವಿಧೆಡೆ ಎಸೆದಿದ್ದ, ಮಂಗಳೂರು ಪೂರ್ವ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಮಹೇಶ್‌ ಎಂ. ಅವರು ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವೆನ್ಲಾಕ್‌ ಆಸ್ಪತ್ರೆಯ ಫೊರೆನ್ಸಿಕ್‌ ವಿಭಾಗದ ವೈದ್ಯಾಧಿಕಾರಿ ಡಾ. ಜಗದೀಶ್‌ ರಾವ್‌ ಶವಪರೀಕ್ಷೆ ನಡೆಸಿ ವರದಿ ನೀಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್‌.ಎಸ್‌. ಅವರು, ಈ ಮೂವರು ದೋಷಿತರು ಎಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣದ ಮೇಲೆ ವಿಚಾರಣೆಯನ್ನು ಇದೇ 17ಕ್ಕೆ ನಿಗದಿ ಪಡಿಸಲಾಗಿದೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲರಾದ ಜುಡಿತ್‌ ಓಲ್ಗಾ ಮಾರ್ಗರೇಟ್‌ ಕ್ರಾಸ್ತಾ ಅವರು ವಾದ ಮಂಡಿಸಿದ್ದರು.

Vishwa News 24

Recent Posts

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

3 minutes ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

33 minutes ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

43 minutes ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

1 hour ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

1 hour ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

2 hours ago